ಕೊರೋನಾ:ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ವಾರ್ಡ್ ಗೆ ಸ್ಥಳಾಂತರ

ಕೊರೋನಾ ಸೋಂಕಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ವಾರ್ಡ್ ಗೆ ಸ್ಥಳಾಂತರಗೊಳಿಸಲಾಗಿದೆ. 

Published: 10th April 2020 02:27 AM  |   Last Updated: 10th April 2020 02:27 AM   |  A+A-


British PM Boris Johnson

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್

Posted By : srinivasrao
Source : Online Desk

ಲಂಡನ್: ಕೊರೋನಾ ಸೋಂಕಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ವಾರ್ಡ್ ಗೆ ಸ್ಥಳಾಂತರಗೊಳಿಸಲಾಗಿದೆ. 

ಪ್ರಧಾನಿಯನ್ನು ಐಸಿಯು ನಿಂದ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ, ಅಲ್ಲಿಯೇ ಅವರಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುವುದು ಎಂದು ಅವರ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. 

ಕೊರೋನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ಸೇಂಟ್ ಥಾಮಸ್ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು. 

ಈ ನಡುವೆ ಬ್ರಿಟನ್ ನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 7,978 ಕ್ಕೆ ಏರಿಕೆಯಾಗಿದ್ದು, 881 ಸಾವನ್ನಪ್ಪಿದ್ದಾರೆ. ಮಾ.23 ರಂದು ಘೋಷಣೆಯಾಗಿದ್ದ ಲಾಕ್ ಡೌನ್ ನ್ನು ಅಲ್ಲಿ ವಿಸ್ತರಣೆ ಮಾಡುವ ಸಾಧ್ಯತೆ ಇದೆ. 
 

Stay up to date on all the latest ಅಂತಾರಾಷ್ಟ್ರೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp