ಅಮೆರಿಕಕ್ಕೆ ಹೊರದೇಶದವರಿಗೆ ನೋ ಎಂಟ್ರಿ: ತಾತ್ಕಾಲಿಕ ನಿರ್ಬಂಧ ಆದೇಶ ಹೊರಡಿಸಲಿದ್ದಾರೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್!

ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ಹೊರ ದೇಶಗಳಿಂದ ವಲಸೆ ಬರುವವರಿಗೆ ತಾತ್ಕಾಲಿಕವಾಗಿ ನಿರ್ಬಂಧಿಸಿ ಆದೇಶ ಹೊರಡಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ಡೊನಾಲ್ಡ್ ಟ್ರಂಪ್
ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ಹೊರ ದೇಶಗಳಿಂದ ವಲಸೆ ಬರುವವರಿಗೆ ತಾತ್ಕಾಲಿಕವಾಗಿ ನಿರ್ಬಂಧಿಸಿ ಆದೇಶ ಹೊರಡಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸದ್ಯದ ಪರಿಸ್ಥಿತಿಯಲ್ಲಿ ಕಣ್ಣಿಗೆ ಕಾಣದಿರುವ ಶತ್ರುಗಳ ದಾಳಿಯ ಹಿನ್ನೆಲೆಯಲ್ಲಿ ಮತ್ತು ಅಮೆರಿಕಾದ ಪ್ರಜೆಗಳ ಉದ್ಯೋಗಗಳನ್ನು ಕಾಪಾಡುವ ಅಗತ್ಯವಿರುವುದರಿಂದ ಅಮೆರಿಕಕ್ಕೆ ಹೊರದೇಶಗಳಿಂದ ವಲಸೆ ಬರುವವರಿಗೆ ತಾತ್ಕಾಲಿಕವಾಗಿ ನಿರ್ಬಂಧ ಹೇರುವ ಆದೇಶಕ್ಕೆ ಸಹಿ ಹಾಕುತ್ತೇನೆ ಎಂದು ತಿಳಿಸಿದ್ದಾರೆ.

ಈ ಆದೇಶ ಯಾವ ದಿನದಿಂದ ಜಾರಿಗೆ ಬರಲಿದೆ ಮತ್ತು ಎಲ್ಲಿಯವರೆಗೆ ಇರುತ್ತದೆ ಎಂಬ ಬಗ್ಗೆ ಮಾಹಿತಿಯಿಲ್ಲ. ಆದರೆ ಇದರಿಂದ ಅಮೆರಿಕಾದ ಕಾನೂನಾತ್ಮಕ ಮತ್ತು ರಾಜಕೀಯ ವಿಷಯಗಳಿಗೆ ಹಿನ್ನಡೆಯಾಗಲಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಬಗ್ಗೆ ಶ್ವೇತಭವನದ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.ಅಧ್ಯಕ್ಷ ಟ್ರಂಪ್ ತಮ್ಮ ವಿಶೇಷ ಆಡಳಿತಾತ್ಮಕ ಅಧಿಕಾರವನ್ನು ಬಳಸಿ ಈ ಆದೇಶ ತರುತ್ತಿದ್ದಾರೆ. ಈ ಹಿಂದೆ ಅವರು ಕೆಲವು ರಾಷ್ಟ್ರಗಳು ಮತ್ತು ಪ್ರದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ್ದ ಸಂದರ್ಭದಲ್ಲಿ ವಿದೇಶಗಳಲ್ಲಿ ಮತ್ತು ಅಮೆರಿಕಾದ ವಿಮಾನ ನಿಲ್ದಾಣಗಳಲ್ಲಿ ವಿರೋಧ ವ್ಯಕ್ತವಾಗಿ ತೀವ್ರ ಗಲಭೆ ಉಂಟಾಗಿತ್ತು.

ಈ ಹೊಸ ಆದೇಶ ಯಾವ ರೀತಿ ಅಲ್ಲಿನ ಸರ್ಕಾರ ಮತ್ತು ದೇಶದ ಒಟ್ಟಾರೆ ವ್ಯವಸ್ಥೆ ಮೇಲೆ ಪರಿಣಾಮ ಬೀರಲಿದೆ ಎಂಬುದನ್ನು ನೋಡಬೇಕಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com