ಬಿಲ್ ಗೇಟ್ಸ್-ಪ್ರಧಾನಿ ಮೋದಿ
ಬಿಲ್ ಗೇಟ್ಸ್-ಪ್ರಧಾನಿ ಮೋದಿ

ಕೊರೋನಾ ವಿರುದ್ಧದ ಸಮರ: ಪ್ರಧಾನಿ ಮೋದಿ ತೆಗೆದುಕೊಂಡ ಕಠಿಣ ನಿರ್ಧಾರಗಳನ್ನು ಹೊಗಳಿದ ಬಿಲ್ ಗೇಟ್ಸ್

ಕೊರೋನಾ ವಿರುದ್ಧದ ಸಮರದಲ್ಲಿ ಶಕ್ತಿಶಾಲಿ ರಾಷ್ಟ್ರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೈಚೆಲ್ಲಿ ಕೂತಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ತೆಗೆದುಕೊಂಡ ಕಠಿಣ ನಿರ್ಧಾರಗಳ ಬಗ್ಗೆ ಶತಕೋಟ್ಯಧಿಪತಿ ಬಿಲ್ ಗೇಟ್ಸ್ ಹೊಗಳಿದ್ದಾರೆ. 

ನವದೆಹಲಿ: ಕೊರೋನಾ ವಿರುದ್ಧದ ಸಮರದಲ್ಲಿ ಶಕ್ತಿಶಾಲಿ ರಾಷ್ಟ್ರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೈಚೆಲ್ಲಿ ಕೂತಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ತೆಗೆದುಕೊಂಡ ಕಠಿಣ ನಿರ್ಧಾರಗಳ ಬಗ್ಗೆ ಶತಕೋಟ್ಯಧಿಪತಿ ಬಿಲ್ ಗೇಟ್ಸ್ ಹೊಗಳಿದ್ದಾರೆ. 

ಮೈಕ್ರೋಸಾಫ್ಟ್ ಸಹ ಸ್ಥಾಪಕ ಬಿಲ್ ಗೇಟ್ಸ್ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು ಅದರಲ್ಲಿ ದೇಶದ ಜನರನ್ನು ಕೊರೋನಾದಿಂದ ರಕ್ಷಿಸಲು ಇಡೀ ದೇಶವನ್ನು ಲಾಕ್ ಡೌನ್ ಮಾಡಿರುವ ನಿಮ್ಮ ಕ್ರಮ ಸ್ವಾಗತಾರ್ಹ. ಇದರಿಂದಾಗಿ ಭಾರತದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗುತ್ತಿವೆ ಎಂದು ಬರೆದಿದ್ದಾರೆ. 

ಸಂಕಷ್ಟ ಸಮಯದಲ್ಲಿ ನಿಮ್ಮ ನಾಯಕತ್ವದಲ್ಲಿ ತೆಗೆದುಕೊಂಡ ನಿರ್ಧಾರಗಳು ನಿಜಕ್ಕೂ ಸ್ವಾಗತಾರ್ಹ. ದೇಶದಲ್ಲಿ ಕೊರೋನಾ ಹರಡಲು ಕಾರಣವಾದ ಹಾಟ್ ಸ್ಪಾಟ್ ಗಳನ್ನು ಗುರುತಿಸುವುದು, ಸೋಂಕಿತರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡುವುದು ಅತ್ಯುತ್ತಮ ಕೆಲಸವಾಗಿದೆ. 

ಇನ್ನು ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದ್ದ ವ್ಯಕ್ತಿಗಳಿಗೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ಕಡ್ಡಾಯ ಮಾಡಿರುವುದು ಕೊರೋನಾ ಕಡಿಮೆಯಾಗಲು ಕಾರಣವಾಗಿದೆ ಎಂದು ಮೋದಿಯವರ ನಾಯಕತ್ವಕ್ಕೆ ಬಿಲ್ ಗೇಟ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಇದೇ ವೇಳೆ ಕೊರೋನಾ ಸೋಂಕಿತರನ್ನು ಪತ್ತೆ ಹಚಲ್ಲು ಆರೋಗ್ಯ ಸೇತು ಆ್ಯಪ್ ಕಂಡು ಹಿಡಿದ ನಿಮ್ಮ ಸರ್ಕಾರಕ್ಕೆ ನನ್ನದೊಂದು ಸಲಾಮ್ ಎಂದಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com