ಅಮೆರಿಕಾಗೆ ಸಡ್ಡು ಹೊಡೆದ ಚೀನಾ! ವಿಶ್ವ ಆರೋಗ್ಯ ಸಂಸ್ಥೆಗೆ ಹೆಚ್ಚುವರಿ 30 ಮಿಲಿಯನ್ ಡಾಲರ್ ಅನುದಾನ! 

ವಿಶ್ವ ಆರೋಗ್ಯ ಸಂಸ್ಥೆಗೆ ನೀಡಲಾಗುತ್ತಿದ್ದ ಆರ್ಥಿಕ ನೆರವಿಗೆ ಅಮೆರಿಕ ಕತ್ತರಿ ಹಾಕಿದ್ದನ್ನೇ ಚೀನಾ ಈಗ ತನ್ನ ಲಾಭಕ್ಕೆ ತಕ್ಕಂತೆ ಬಳಸಿಕೊಳ್ಳಲು ಮುಂದಾಗಿದೆ. 
ಚೀನಾ
ಚೀನಾ

ಬೀಜಿಂಗ್: ವಿಶ್ವ ಆರೋಗ್ಯ ಸಂಸ್ಥೆಗೆ ನೀಡಲಾಗುತ್ತಿದ್ದ ಆರ್ಥಿಕ ನೆರವಿಗೆ ಅಮೆರಿಕ ಕತ್ತರಿ ಹಾಕಿದ್ದನ್ನೇ ಚೀನಾ ಈಗ ತನ್ನ ಲಾಭಕ್ಕೆ ತಕ್ಕಂತೆ ಬಳಸಿಕೊಳ್ಳಲು ಮುಂದಾಗಿದೆ. 

ಅಮೆರಿಕ ಆರ್ಥಿಕ ನೆರವು ನೀಡುವುದನ್ನು ಸ್ಥಗಿತಗೊಳಿಸಿದ ಬೆನ್ನಲ್ಲೇ ಚೀನಾ ಈಗ ವಿಶ್ವ ಆರೋಗ್ಯ ಸಂಸ್ಥೆಗೆ ಆರ್ಥಿಕ ನೆರವು ನೀಡಲು ಮುಂದಾಗಿದ್ದು 30 ಮಿಲಿಯನ್ ಡಾಲರ್ ಅನುದಾನ ನೀಡುವುದಾಗಿ ಘೋಷಿಸಿದೆ. ಕೋವಿಡ್-19 ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಸಮುದಾಯವನ್ನು ಎಚ್ಚರಿಸುವಲ್ಲಿ ವಿಫಲವಾಗಿದೆ ಎಂಬ ಕಾರಣಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಿಂದ ಡಬ್ಲ್ಯು ಹೆಚ್ ಒಗೆ ನೀಡಲಾಗುತ್ತಿದ್ದ ಅನುದಾನವನ್ನು ಸ್ಥಗಿತಗೊಳಿಸಿದ್ದರು. ಈ ಬಗ್ಗೆ ವ್ಯಾಪಕ ಟೀಕೆಗಳೂ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಚೀನಾ, ಅಮೆರಿಕದ ನಡೆಯನ್ನು ಕಳವಳಕಾರಿ ಎಂದು ಹೇಳಿತ್ತು. 

ವಿಶ್ವ ಆರೋಗ್ಯ ಸಂಸ್ಥೆಗೆ ನೀಡಲಾಗುತ್ತದ್ದ ಆರ್ಥಿಕ ನೆರವಿನ ವಿಷಯದಲ್ಲಿ ಅಮೆರಿಕಾಗೆ ಚೀನಾ ಪರ್ಯಾಯವಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಚೀನಾ, ನಾವು ಈಗ ವಿಶ್ವ ಆರೋಗ್ಯ ಸಂಸ್ಥೆಗೆ 20 ಮಿಲಿಯನ್ ಡಾಲರ್ ನೀಡುತ್ತೇವೆ. ಸಂಬಂಧಪಟ್ಟ ವಿಷಯದ ಬಗ್ಗೆ ಅಧ್ಯಯನ ನಡೆಸುತ್ತೇವೆ ಎಂದು ಹೇಳಿದೆ. ಕೊರೋನಾ ವೈರಸ್ ಸಾಂಕ್ರಾಮಿಕ ರೋಗ, ಅದನ್ನು ನಿಯಂತ್ರಿಸುವ ಬಗ್ಗೆ ವಿಶ್ವಸಮುದಾಯಕ್ಕೆ ಮುನ್ನೆಚ್ಚರಿಕೆ ನೀಡಲಿಲ್ಲ ಎಂಬ ಆರೋಪ ಚೀನಾ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ವಿರುದ್ಧ ಕೇಳಿಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com