ಕೊರೋನಾ ಗುಣಮುಕ್ತ ಇಂಗ್ಲೆಂಡ್ ಪ್ರಧಾನಿ ಬೊರಿಸ್ ಜಾನ್ಸನ್ ಕೆಲಸಕ್ಕೆ ಹಾಜರ್

ಕೊರೋನಾ ಸೋಂಕಿನಿಂದ ತೀವ್ರವಾಗಿ ಬಳಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದಿದ್ದ ಇಂಗ್ಲೆಂಡ್ ಪ್ರಧಾನಿ ಬೊರಿಸ್ ಜಾನ್ಸನ್ ಸೋಮವಾರ ತಮ್ಮ ಕೆಲಸಕ್ಕೆ ಹಾಜರಾಗಿದ್ದಾರೆ.
ಬೊರಿಸ್ ಜಾನ್ಸನ್
ಬೊರಿಸ್ ಜಾನ್ಸನ್

ಲಂಡನ್: ಕೊರೋನಾ ಸೋಂಕಿನಿಂದ ತೀವ್ರವಾಗಿ ಬಳಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದಿದ್ದ ಇಂಗ್ಲೆಂಡ್ ಪ್ರಧಾನಿ ಬೊರಿಸ್ ಜಾನ್ಸನ್ ಸೋಮವಾರ ತಮ್ಮ ಕೆಲಸಕ್ಕೆ ಹಾಜರಾಗಿದ್ದಾರೆ.

ಇಂಗ್ಲೆಂಡ್ ನಲ್ಲಿ ಇದುವರೆಗೆ ಕೊರೋನಾ ಸೋಂಕಿಗೆ 20 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

55 ವರ್ಷದ ಪ್ರಧಾನಿ ಬೊರಿಸ್ ಕಳೆದ ಏಪ್ರಿಲ್ 12ರಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಬಂದ ನಂತರ ತಮ್ಮ ನಿವಾಸ ಬಕಿಂಗ್ ಹ್ಯಾಮ್ ಶೈರ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಅವರ ಅನುಪಸ್ಥಿತಿಯಲ್ಲಿ ಇಂಗ್ಲೆಂಡಿನ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್ ಉಪ ಪ್ರಧಾನಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದರು.

ಪ್ರಧಾನಿ ಬೊರಿಸ್ ಜಾನ್ಸನ್ ಇಂದು ಸಂಪುಟ ಸಹೋದ್ಯೋಗಿಗಳ ಜೊತೆ ಕೋವಿಡ್-19 ಸಭೆ ನಡೆಸುವ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com