ಶ್ರೀಲಂಕಾ ಸಾರ್ವತ್ರಿಕ ಚುನಾವಣೆ: ಮಹಿಂದ ರಾಜಪಕ್ಸೆ ಪಕ್ಷಕ್ಕೆ ಅಭೂತಪೂರ್ವ ಜಯ

ಶ್ರೀಲಂಕಾ ಸಾರ್ವತ್ರಿಕ ಚುನಾವಣೆಯಲ್ಲಿ ಮಹಿಂದಾ ರಾಜಪಕ್ಸೆ ಅವರ ಆಡಳಿತಾ ರೂಢ ಎಸ್‌ಎಲ್‌ಪಿಪಿ (ಶ್ರೀಲಂಕಾ ಪೀಪಲ್ಸ್ ಪಾರ್ಟಿ) ಪಕ್ಷ ಅಭೂತಪೂರ್ವ ಜಯಸಾಧಿಸಿದ್ದು ಮತ್ತೆ ಅಧಿಕಾರಕ್ಕೇರುವುದು ಖಚಿತವಾಗಿದೆ.

Published: 07th August 2020 01:35 PM  |   Last Updated: 07th August 2020 01:35 PM   |  A+A-


Rajapaksa registers landslide victory

ಮಹಿಂದಾ ರಾಜಪಕ್ಸೆ

Posted By : Srinivasamurthy VN
Source : PTI

ಕೊಲಂಬೊ: ಶ್ರೀಲಂಕಾ ಸಾರ್ವತ್ರಿಕ ಚುನಾವಣೆಯಲ್ಲಿ ಮಹಿಂದಾ ರಾಜಪಕ್ಸೆ ಅವರ ಆಡಳಿತಾ ರೂಢ ಎಸ್‌ಎಲ್‌ಪಿಪಿ (ಶ್ರೀಲಂಕಾ ಪೀಪಲ್ಸ್ ಪಾರ್ಟಿ) ಪಕ್ಷ ಅಭೂತಪೂರ್ವ ಜಯಸಾಧಿಸಿದ್ದು ಮತ್ತೆ ಅಧಿಕಾರಕ್ಕೇರುವುದು ಖಚಿತವಾಗಿದೆ.

ದ್ವೀಪ ರಾಷ್ಟ್ರದಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಗುರುವಾರ ತಡರಾತ್ರಿಯೂ ಮುಂದುವರಿಯಿತು. ಶ್ರೀಲಂಕಾ ಸಂಸತ್‌ನ ಸದಸ್ಯರ ಸಂಖ್ಯೆ 225 ಆಗಿದ್ದು ಈ ಪೈಕಿ ಪ್ರಕಟವಾದ ಫಲಿತಾಂಶಗಳ ಪೈಕಿ ರಾಜಪಕ್ಸೆಯವರ ಪಕ್ಷ ಭಾರಿ ಗೆಲುವಿನತ್ತ ಸಾಗಿದೆ. ಮೂಲಗಳ ಪ್ರಕಾರ ರಾಜಪಕ್ಸೆ ಅವರ ಎಸ್ ಎಲ್ ಪಿಪಿ ಪಕ್ಷ 145 ಸ್ಥಾನಗಳಲ್ಲಿ ಜಯಭೇರಿ ಭಾರಿಸಿದ್ದು, ಎಸ್ ಎಲ್ ಪಿಪಿ ಸೇರಿದಂತೆ ರಾಜಪಕ್ಸೆ ಅವರ ಮೈತ್ರಿಕೂಟ ಒಟ್ಟು 150 ಸ್ಥಾನಗಳನ್ನು ಗೆದ್ದಿದೆ. 

ಸಿಂಹಳ ಸಮುದಾಯದವರು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ರಾಜಪಕ್ಸೆ ಪಕ್ಷಕ್ಕೆ ಶೇ.60ರಷ್ಚು ಮತಗಳು ಚಲಾವಣೆಯಾಗಿದೆ ಎಂದು ಹೇಳಲಾಗಿದೆ. ಚಲಾವಣೆಯಾದ ಒಟ್ಟು 6.8 ಮಿಲಿಯನ್ ಮತಗಳ ಪೈಕಿ ರಾಜಪಕ್ಸೆ ಅವರ ಪಕ್ಷಕ್ಕೇ ಶೇ.59.9ರಷ್ಟು ಮತಗಳು ಚಲಾವಣೆಯಾಗಿದೆ ಎನ್ನಲಾಗಿದೆ.  ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ‘ಇದು ಆಡಳಿತಾರೂಢ ಪಕ್ಷಕ್ಕೆ ಲಭಿಸಿದ ಅದ್ಭುತ ಗೆಲುವು’ ಎಂದು ಟ್ವೀಟ್‌ ಮಾಡಿದ್ದಾರೆ.  

ಮಹಿಂದ ಅವರ ಪ್ರಬಲ ಪ್ರತಿಸ್ಪರ್ಧಿ ಎಂದೇ ಪರಿಗಣಿಸಲಾಗಿರುವ ಸಜಿತ್‌ ಪ್ರೇಮದಾಸ ಅವರ ಪಕ್ಷ ಯುನೈಟೆಡ್‌ ನ್ಯಾಷನಲ್‌ ಪಾರ್ಟಿ (ಯುಎನ್‌ಪಿ) ನಾಲ್ಕನೇ ಸ್ಥಾನ ಪಡೆದಿದೆ.

ಪ್ರಧಾನಿ ಮೋದಿ ಕರೆ
ಅತ್ತ ರಾಜಪಕ್ಸೆ ಅವರ ಗೆಲುವು ಖಚಿತವಾಗುತ್ತಿದ್ದಂತೆಯೇ ಇತ್ತ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು  ರಾಜಪಕ್ಸೆ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.  ಈ ಕುರಿತು ಖುದ್ದು ಮಹೀಂದಾ ರಾಜಪಕ್ಸೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಚುನಾವಣೆ ವಿಜಯಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದು, ಶ್ರೀಲಂಕಾ ಜನರ ಆಶೀರ್ವಾದದೊಂದಿಗೆ ಭಾರತದೊಂದಿಗಿನ ಸುಮಧುರ ಸಂಬಂಧವನ್ನು ಮುಂದುವರೆಸುವುದಾಗಿ ರಾಜಪಕ್ಸೆ ಹೇಳಿದ್ದಾರೆ. ಭಾರತ-ಶ್ರೀಲಂಕಾ ಸಂಬಂಧ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಮತ್ತಷ್ಟು ಗಟ್ಟಿಯಾಗಲಿದ್ದು, ಮೋದಿ ಅವರೊಂದಿಗೆ ಹೆಗಲು ಕೊಟ್ಟು ಕೆಲಸ ಮಾಡಲು ಸಿದ್ಧ ಎಂದು ರಾಜಪಕ್ಸೆ ಭರವಸೆ ನೀಡಿದ್ದಾರೆ. ರಾಜಪಕ್ಸೆ ಅವರ ಟ್ವೀಟ್‌ಗೆ ಮರು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭಾರತ-ಶ್ರೀಲಂಕಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಸಿದ್ಧವಿರುವುದಾಗಿ ಹೇಳಿದ್ದಾರೆ.

Stay up to date on all the latest ಅಂತಾರಾಷ್ಟ್ರೀಯ news
Poll
farmers-Protest

ದೆಹಲಿಯಲ್ಲಿ ಟ್ರಾಕ್ಟರ್ ಪೆರೇಡ್ ಸಮಯದಲ್ಲಿನ ಹಿಂಸಾಚಾರವು ರೈತರ ಆಂದೋಲನದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp