ಎರಡು ವರ್ಷದಲ್ಲಿ ಮಹಾಮಾರಿ ಕೊರೋನಾ ಹಾವಳಿ ಸಂಪೂರ್ಣ ಮಾಯಾ: ಟೆಡ್ರೋಸ್ ಅಧನೋಮ್

ವಿಶ್ವದಲ್ಲಿ ಕೊರೋನಾ ಸೋಂಕು ಹಾವಳಿ ಮುಂದಿನ  ಎರಡು ವರ್ಷಗಳ ಒಳಗಾಗಿ ಸಂಪೂರ್ಣ ನಿವಾರಣೆಯಾಗಲಿದೆ ಎಂಬ ಆಶಯವನ್ನು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಅಧನೋಮ್ ಗೇಬ್ರಿಯಾಸಿಸ್ ವ್ಯಕ್ತಪಡಿಸಿದ್ದಾರೆ.
ಟೆಡ್ರೋಸ್ ಅಧನೋಮ್ ಗೇಬ್ರಿಯಾಸಿಸ್
ಟೆಡ್ರೋಸ್ ಅಧನೋಮ್ ಗೇಬ್ರಿಯಾಸಿಸ್

ಜಿನೀವಾ: ವಿಶ್ವದಲ್ಲಿ ಕೊರೋನಾ ಸೋಂಕು ಹಾವಳಿ ಮುಂದಿನ  ಎರಡು ವರ್ಷಗಳ ಒಳಗಾಗಿ ಸಂಪೂರ್ಣ ನಿವಾರಣೆಯಾಗಲಿದೆ ಎಂಬ ಆಶಯವನ್ನು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಅಧನೋಮ್ ಗೇಬ್ರಿಯಾಸಿಸ್ ವ್ಯಕ್ತಪಡಿಸಿದ್ದಾರೆ. 

1918ರಲ್ಲಿ ಇಡೀ ವಿಶ್ವವನ್ನು ಕಾಡಿದ್ದ ಸ್ಪ್ಯಾನಿಶ್ ಫ್ಲೂ ಸಹ ಎರಡು ವರ್ಷಗಳಲ್ಲಿ ಅಂತ್ಯವಾಗಿತ್ತು ಎಂದೂ ಅವರು ಹೇಳಿದ್ದಾರೆ.

ಅಧಿಕ ತಂತ್ರಜ್ಞಾನ ಮತ್ತು ಸಂಪರ್ಕದಿಂದಾಗಿ ಸೋಂಕು ಹರಡುವ ಸಾಧ್ಯತೆ ಅಧಿಕ. ಅದು ಹೆಚ್ಚು ವೇಗವಾಗಿ ಹರಡಬಲ್ಲದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಜಗತ್ತಿನಾದ್ಯಂತ 2,31,25,472 ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇನ್ನು 8,03,253 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 1,57,16,611 ಮಂದಿ ಚೇತರಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com