ದಾವೂದ್ ಪಾಕ್ ನಲ್ಲೇ ಇದ್ದಾನೆ, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ: ಫತ್ಫ್ ಕಪ್ಪು ಪಟ್ಟಿ ಭೀತಿ ಬೆನ್ನಲ್ಲೇ ಪಾಕ್ ಹೇಳಿಕೆ

ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದು, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ ಮಾಡಲಾಗಿದೆ ಎಂದು ಪಾಕಿಸ್ತಾನ ಸರ್ಕಾರ ಶನಿವಾರ ಹೇಳಿದೆ.

Published: 22nd August 2020 09:32 PM  |   Last Updated: 22nd August 2020 09:32 PM   |  A+A-


Hafiz Saeed-Masood Azhar-Dawood Ibrahim

ದಾವೂದ್, ಹಫೀಜ್ ಸಯೀದ್, ಮಸೂದ್ ಅಜರ್

Posted By : Srinivasamurthy VN
Source : IANS

ಇಸ್ಲಾಮಾಬಾದ್: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದು, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ ಮಾಡಲಾಗಿದೆ ಎಂದು ಪಾಕಿಸ್ತಾನ ಸರ್ಕಾರ ಶನಿವಾರ ಹೇಳಿದೆ.

ಈ ಬಗ್ಗೆ ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದ್ದು, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿ ವಾಸಿಸುತ್ತಿದ್ದಾನೆ ಎಂದು ಪಾಕಿಸ್ತಾನ ಸರ್ಕಾರ ಒಪ್ಪಿಕೊಂಡಿದೆ ಎನ್ನಲಾಗಿದೆ. ಇದೇ ದಾವೂದ್ ವಿಚಾರವಾಗಿ ಭಾರತ ಸಾಕಷ್ಟು ವರ್ಷಗಳ ಪಾಕ್ ಸರ್ಕಾರದ ಮೇಲೆ ಒತ್ತಡ ಹೇರಿತ್ತು. ದಾವೂದ್  ಪಾಕ್ ನಲ್ಲೇ ಇದ್ದು, ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ಐ ಆತನಿಗೆ ಆಶ್ರಯ ನೀಡಿದೆ ಎಂದೂ ವಾದಿಸಿತ್ತು. ಆದರೆ ಅದನ್ನು ದಶಕಗಳ ಕಾಲ ಪಾಕಿಸ್ತಾನ ನಿರಾಕರಿಸುತ್ತಾ ಬಂದಿತ್ತು. ಇದೀಗ ಫತ್ಫ್ ಪಟ್ಟಿ ಭೀತಿ ಹಿನ್ನಲೆಯಲ್ಲಿ ದಾವೂದ್ ಪಾಕಿಸ್ತಾನದಲ್ಲಿರುವುದನ್ನು ಬೇರೆ ದಾರಿ ಇಲ್ಲದೆ ಒಪ್ಪಿಕೊಂಡಿದೆ.

ಇಷ್ಟು ಮಾತ್ರವಲ್ಲದೇ ಭಯೋತ್ಪಾದಕ ಗುಂಪುಗಳು ಮತ್ತು ಅವರ ನಾಯಕರಾದ ಹಫೀಜ್ ಸಯೀದ್, ಮಸೂದ್ ಅಜರ್ ಮತ್ತು ದಾವೂದ್ ಇಬ್ರಾಹಿಂ ಸೇರಿದಂತೆ 88 ನಿಷೇಧಿತ ಭಯೋತ್ಪಾದಕ ಗುಂಪುಗಳ ನಾಯಕರು ಮತ್ತು ಮೋಸ್ಟ್ ವಾಂಟೆಡ್ ಉಗ್ರರ ಮೇಲಿನ ನಿರ್ಬಂಧಗಳನ್ನು ಹೆಚ್ಚಳ ಮಾಡಲಾಗಿದೆ.  ಭಯೋತ್ಪಾದಕ ಗುಂಪುಗಳು ಮತ್ತು ಅವರ ನಾಯಕರುಗಳ ಎಲ್ಲಾ ಆಸ್ತಿಗಳನ್ನು ವಶಪಡಿಸಿಕೊಳ್ಳಲು ಮತ್ತು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಆದೇಶಿಸುವ ಮೂಲಕ ಕಠಿಣ ಆರ್ಥಿಕ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದೂ ಪಾಕ್ ಹೇಳಿದೆ.

ಪ್ಯಾರಿಸ್ ಮೂಲದ ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಫತ್ಫ್-ಎಫ್‌ಎಟಿಎಫ್) 2018 ರ ಜೂನ್‌ನಲ್ಲಿ ಪಾಕಿಸ್ತಾನವನ್ನು ಬೂದು ಪಟ್ಟಿಯಲ್ಲಿ ಸೇರಿಸಿತ್ತು. 2019 ರ ಅಂತ್ಯದ ವೇಳೆಗೆ ಉಗ್ರ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಆದರೆ COVID-19 ಸಾಂಕ್ರಾಮಿಕ  ರೋಗದಿಂದಾಗಿ ಈ ಗಡುವನ್ನು ನಂತರ ಫತ್ಫ್ ವಿಸ್ತರಿಸಿತು. 

ಭಯೋತ್ಪಾದಕ ಸಂಘಟನೆಗಳ ಪ್ರಮುಖ ವ್ಯಕ್ತಿಗಳಾದ 26/11 ಮುಂಬೈ ದಾಳಿ ಮಾಸ್ಟರ್ ಮೈಂಡ್ ಮತ್ತು ಜಮಾತ್-ಉದ್-ದವಾ (ಜುಡಿ) ಮುಖ್ಯಸ್ಥ ಸಯೀದ್, ಜೈಶ್-ಎ-ಮೊಹಮ್ಮದ್ (ಜೆಎಂ) ಮುಖ್ಯಸ್ಥ ಅಜರ್, ಮತ್ತು ಭೂಗತ ಜಗತ್ತಿನ ಡಾನ್ ದಾವೂದ್ ಇಬ್ರಾಹಿಂ ಅವರ ಮೇಲೆ ನಿರ್ಬಂಧ ವಿಧಿಸುವ ಹಿನ್ನಲೆಯಲ್ಲಿ  ಅಗಸ್ಟ್ 18 ರಂದು ನೋಟಿಸ್ ಹೊರಡಿಸಿತ್ತು. 

ಬಹು ಅಕ್ರಮ ವ್ಯವಹಾರದ ಮುಖ್ಯಸ್ಥರಾಗಿರುವ ದಾವೂದ್ ಇಬ್ರಾಹಿಂ 1993 ರ ಮುಂಬೈ ಬಾಂಬ್ ಸ್ಫೋಟದ ನಂತರ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಎಂದು ಘೋಷಣೆ ಮಾಡಲಾಗಿತ್ತು. 

Stay up to date on all the latest ಅಂತಾರಾಷ್ಟ್ರೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp