ಪಿಎನ್ ಬಿ ಹಗರಣ: ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ, 2021ಕ್ಕೆ ಅಂತಿಮ ವಿಚಾರಣೆ
ಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಡಿಸೆಂಬರ್ 29ರ ವರೆಗೆ ವಿಸ್ತರಿಸಿದೆ.
Published: 01st December 2020 07:44 PM | Last Updated: 01st December 2020 07:44 PM | A+A A-

ನೀರವ್ ಮೋದಿ
ಲಂಡನ್: ಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಡಿಸೆಂಬರ್ 29ರ ವರೆಗೆ ವಿಸ್ತರಿಸಿದೆ.
ಪ್ರಸ್ತುತ ಜೈಲಿನಲ್ಲಿರುವ 48 ವರ್ಷದ ನೀರವ್ ಮೋದಿಯ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಆರೋಪಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಎಮ್ಮಾ ಅರ್ಬುತ್‌ನೋಟ್ ಅವರು, ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 28 ದಿನಗಳ ಕಾಲ ವಿಸ್ತರಿಸಿದರು.
ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ಮುಂದಿನ ವರ್ಷ ಜನವರಿ 7 ಮತ್ತು 8 ರಂದು ಅಂತಿಮ ಹಂತದ ವಿಚಾರಣೆ ನಡೆಯಲಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13,500 ಕೋಟಿ ರೂ ವಂಚನೆ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನೀರವ್ ಮೋದಿ ಅವರನ್ನು ಲಂಡನ್ ನಲ್ಲಿ ಬಂಧಿಸಲಾಗಿದೆ.