ಶ್ವೇತ ಭವನದಿಂದ ನಿರ್ಗಮಿಸುವುದಕ್ಕೂ ಮುನ್ನ ಭಾರತ, ಮೋದಿ ಕುರಿತು ಟ್ರಂಪ್ ಪುತ್ರಿ ಇವಾಂಕ ಹೇಳಿದ್ದೇನು ಅಂದ್ರೆ...
ಜನವರಿ ಯಲ್ಲಿ ಅಮೆರಿಕದ ಅಧ್ಯಕ್ಷರಾಗಿ ಜೋ ಬೈಡನ್ ಅಧಿಕಾರ ವಹಿಸಿಕೊಳ್ಳಲಿದ್ದು, ಹಾಲಿ ಅಧ್ಯಕ್ಷ ಟ್ರಂಪ್ ಶ್ವೇತ ಭವನದಿಂದ ನಿರ್ಗಮಿಸಲಿದ್ದಾರೆ.
Published: 02nd December 2020 12:55 PM | Last Updated: 02nd December 2020 05:38 PM | A+A A-

ಇವಾಂಕ ಟ್ರಂಪ್- ಪ್ರಧಾನಿ ನರೇಂದ್ರ ಮೋದಿ
ವಾಷಿಂಗ್ ಟನ್: ಜನವರಿ ಯಲ್ಲಿ ಅಮೆರಿಕದ ಅಧ್ಯಕ್ಷರಾಗಿ ಜೋ ಬೈಡನ್ ಅಧಿಕಾರ ವಹಿಸಿಕೊಳ್ಳಲಿದ್ದು, ಹಾಲಿ ಅಧ್ಯಕ್ಷ ಟ್ರಂಪ್ ಶ್ವೇತ ಭವನದಿಂದ ನಿರ್ಗಮಿಸಲಿದ್ದಾರೆ.
ಟ್ರಂಪ್ ಅಧಿಕಾರಾವಧಿ ಮುಕ್ತಾಯಗೊಳ್ಳುವುದಕ್ಕೆ ಇನ್ನು ಕೆಲವೇ ವಾರಗಳಷ್ಟೇ ಬಾಕಿ ಇದ್ದು, ಅವರ ಪುತ್ರಿ ಇವಾಂಕ ಟ್ರಂಪ್ ಭಾರತ ಭೇಟಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಕುರಿತು ಮಾತನಾಡಿದ್ದಾರೆ.
ಭಾರತಕ್ಕೆ ಭೇಟಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದ ಅಪರೂಪದ ನೆನಪುಗಳನ್ನು ಮೆಲಕು ಹಾಕಿರುವ ಇವಾಂಕ, ಅಪರೂಪದ ಫೋಟೋಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
2017 ರಲ್ಲಿ ನಡೆದ ಜಾಗತಿಕ ಉದ್ಯಮಿಗಳ ಶೃಂಗಸಭೆಯಲ್ಲಿ ಅಮೆರಿಕ ನಿಯೋಗದೊಂದಿಗೆ ಭಾಗವಹಿಸಿದ್ದನ್ನು ನೆನಪಿಸಿಕೊಂಡಿದ್ದು, ಜಾಗತಿಕ ಭದ್ರತೆ, ಸ್ಥಿರತೆ ಹಾಗೂ ಅರ್ಥಿಕ ಸಮೃದ್ಧಿಯನ್ನು ಉತ್ತೇಜಿಸುವುದಕ್ಕೆ ಭಾರತ-ಅಮೆರಿಕದ ಸ್ನೇಹ ಬಲವಾಗಿರುವುದು ಹಿಂದೆಂದಿಗಿಂತಲೂ ಮುಖ್ಯವಾದದ್ದು ಎಂದು ಹೇಳಿದ್ದಾರೆ.
ಟ್ರಂಪ್ ಆಡಳಿತಾವಧಿಯಲ್ಲಿ ಇವಾಂಕ ಭಾರತಕ್ಕೆ ಎರಡು ಬಾರಿ ಭೇಟಿ ನೀಡಿದ್ದರು. 2020 ರ ಫೆಬ್ರವರಿ ತಿಂಗಳಲ್ಲಿ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಿದ್ದರು.