ಪ್ರತಿಕಾರದ ದಾಳಿಯಲ್ಲಿ 90 ತಾಲಿಬಾನ್ ಉಗ್ರರನ್ನು ಹೊಡೆದುರುಳಿಸಿದ ಆಫ್ಘಾನ್ ಸೇನೆ

ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ಆಫ್ಘಾನಿಸ್ತಾನ ರಾಷ್ಟ್ರೀಯ ಭದ್ರತಾ ಪಡೆ(ಎಎನ್‌ಎಸ್‌ಎಫ್) ನಡೆಸಿದ ಪ್ರತೀಕಾರ ದಾಳಿಯಲ್ಲಿ ತಾಲಿಬಾನ್ ಸಂಘಟನೆಯ ಒಟ್ಟು 90 ಉಗ್ರರು ಹತರಾಗಿದ್ದಾರೆ ಎಂದು ದೇಶದ ರಕ್ಷಣಾ ಸಚಿವಾಲಯ ತಿಳಿಸಿದೆ.
ತಾಲಿಬಾನ್ ಬಂಡುಕೋರರು
ತಾಲಿಬಾನ್ ಬಂಡುಕೋರರು

ಕಾಬೂಲ್: ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ಆಫ್ಘಾನಿಸ್ತಾನ ರಾಷ್ಟ್ರೀಯ ಭದ್ರತಾ ಪಡೆ(ಎಎನ್‌ಎಸ್‌ಎಫ್) ನಡೆಸಿದ ಪ್ರತೀಕಾರ ದಾಳಿಯಲ್ಲಿ ತಾಲಿಬಾನ್ ಸಂಘಟನೆಯ ಒಟ್ಟು 90 ಉಗ್ರರು ಹತರಾಗಿದ್ದಾರೆ ಎಂದು ದೇಶದ ರಕ್ಷಣಾ ಸಚಿವಾಲಯ ತಿಳಿಸಿದೆ.

ಕಂದಹಾರ್ ಪ್ರಾಂತ್ಯದ ಜೆರಿಯಾ, ಪಂಜವಾಯಿ, ಝಾರಿ, ಅರ್ಘಂಡಾಬ್ ಮತ್ತು ಮೈವಾಂಡ್ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ನಡೆಸಿದ ದಾಳಿಯಲ್ಲಿ 90 ತಾಲಿಬಾನ್ ಉಗ್ರರು ಹತರಾಗಿದ್ದು, ಇತರ 12 ಮಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯ ಟ್ವಿಟ್ಟರ್ ಮೂಲಕ ತಿಳಿಸಿದೆ.

ತಾಲಿಬಾನ್ ಉಗ್ರರು ಹೂತಿಟ್ಟಿದ್ದ 30 ಸುಧಾರಿತ ಸ್ಫೋಟಕ ಸಾಧನಗಳನ್ನು ಪತ್ತೆ ಮಾಡಿ ನಿಷ್ಕ್ರಿಯಗೊಳಿಸಲಾಗಿದೆ ಎಂದಿರುವ ಆಫ್ಘಾನಿಸ್ತಾನ ಸೇನೆ, ಜೆರಿಯಾ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಘರ್ಷಣೆಗಳಲ್ಲಿ ಇತರ 10 ತಾಲಿಬಾನ್ ಉಗ್ರರು ಹತರಾಗಿದ್ದಾರೆ ಎಂದು ಸಚಿವಾಲಯ ವರದಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com