ವಾಷಿಂಗ್ಟನ್ ನಲ್ಲಿ ಖಲಿಸ್ತಾನಿ ಬೆಂಬಲಿಗರಿಂದ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ!

ಇತ್ತೀಚಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿ ಸಿಖ್ ಅಮೆರಿಕನ್ ಯುವಕರು ಆಯೋಜಿಸಿದ್ದ ಪ್ರತಿಭಟನೆ ವೇಳೆಯಲ್ಲಿ ಖಲಿಸ್ತಾನಿ ಪ್ರತ್ಯೇಕತೆಯ ಸದಸ್ಯರು ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ.
ಗಾಂಧಿ ಪ್ರತಿಮೆಗೆ ಮೋದಿ ಛಾಯಾಚಿತ್ರ ಸುತ್ತಿರುವ ಖಲಿಸ್ತಾನಿ ಬೆಂಬಲಿಗರು
ಗಾಂಧಿ ಪ್ರತಿಮೆಗೆ ಮೋದಿ ಛಾಯಾಚಿತ್ರ ಸುತ್ತಿರುವ ಖಲಿಸ್ತಾನಿ ಬೆಂಬಲಿಗರು

ವಾಷಿಂಗ್ಟನ್:  ಇತ್ತೀಚಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿ ಸಿಖ್ ಅಮೆರಿಕನ್ ಯುವಕರು ಆಯೋಜಿಸಿದ್ದ ಪ್ರತಿಭಟನೆ ವೇಳೆಯಲ್ಲಿ ಖಲಿಸ್ತಾನಿ ಪ್ರತ್ಯೇಕತೆಯ ಸದಸ್ಯರು ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ.

ಗ್ರೇಟರ್ ವಾಷಿಂಗ್ಟನ್ ಡಿಸಿ, ನ್ಯೂಯಾರ್ಕ್, ನ್ಯೂಜೆರ್ಸಿ, ಪೆನ್ಸಿಲ್ವೇನಿಯಾ, ಇಂಡಿಯಾನಾ, ಓಹಿಯೋ ಮತ್ತು ಉತ್ತರ ಕೆರೊಲಿನಾ ಸುತ್ತಮುತ್ತಲಿನ ನೂರಾರು ಸಿಖ್ ಸಮುದಾಯದವರು ವಾಷ್ಟಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರಿ ಕಚೇರಿಯವರೆಗೂ ಕಾರು ರ್ಯಾಲಿ ನಡೆಸುವ ಮೂಲಕ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಶಾಂತಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಸಿಖ್ ಪ್ರತ್ಯೇಕತಾವಾದಿಗಳು ಹೈಜಾಕ್ ಮಾಡಿದ್ದು, ಭಾರತ ವಿರೋಧಿ ಘೋಷಣೆ ಕೂಗುತ್ತಾ ಮಹಾತ್ಮ ಗಾಂಧಿ ಪ್ರತಿಮೆ ಬಳಿಗೆ ಜಿಗಿದು ಅದರ ಸುತ್ತ ಪೋಸ್ಟರ್ ಸುತ್ತಿ ವಿರೂಪಗೊಳಿಸಿದ್ದಾರೆ.  ಪ್ರತಿಭಟನಾಕಾರರ ಅನುಚಿತ ವರ್ತನೆಯನ್ನು ಭಾರತೀಯ ರಾಯಭಾರಿ ಅಧಿಕಾರಿಗಳು ಖಂಡಿಸಿದ್ದಾರೆ.

ಈ ಘಟನೆಯ ಬಗ್ಗೆ ತನಿಖೆ ನಡೆದು ದುಷ್ಕರ್ಮಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ಅಮೆರಿಕಾದ ಕಾನೂನು ಜಾರಿ ಏಜೆನ್ಸಿಯಲ್ಲಿ ದೂರು ದಾಖಲಿಸಲಾಗಿದೆ. ಈ ಘಟನೆ ನಡೆದ ಅರ್ಧ ಗಂಟೆಯ ನಂತರ ಮತ್ತೊಂದು ಖಲಿಸ್ತಾನಿ ಬೆಂಬಲಿಗರು ನರೇಂದ್ರ ಮೋದಿ ಅವರ ಛಾಯಾಚಿತ್ರವನ್ನು ಮಹಾತ್ಮ ಗಾಂಧಿ ಪ್ರತಿಮೆ ಸುತ್ತ ಸುತ್ತಿದ್ದಾರೆ. ಒಂದು ಗಂಟೆಯ ನಂತರ ಸ್ಥಳಕ್ಕಾಗಮಿಸಿದ ರಹಸ್ಯ ಸೇವೆ ಏಜೆಂಟರು ಯುವಕರು ಕಾನೂನು ಉಲ್ಲಂಘಿಸಿ ಪ್ರತಿಮೆಯನ್ನು ಧ್ವಂಸಗೊಳಿಸುವಲ್ಲಿ ತೊಡಗಿಸಿಕೊಂಡಿದ್ದರು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com