ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಗೆ ಕೋವಿಡ್ ಪಾಸಿಟಿವ್

 ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು, ಏಳು ದಿನಗಳ ಸ್ವಯಂ ಐಸೋಲೇಷನ್ ನಲ್ಲಿದ್ದಾರೆ.
ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್
ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್

ಪ್ಯಾರಿಸ್: ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು, ಏಳು ದಿನಗಳ ಸ್ವಯಂ ಐಸೋಲೇಷನ್ ನಲ್ಲಿದ್ದಾರೆ.

ಮೊದಲ ಬಾರಿಗೆ ರೋಗ ಲಕ್ಷಣ ಕಂಡುಬಂದ ನಂತರ ಪರೀಕ್ಷೆಗೊಳಪಟ್ಟ ಎಮ್ಯಾನುಯೆಲ್  ಮ್ಯಾಕ್ರನ್ ಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ರಾಷ್ಟ್ರೀಯ ನಿಯಮಗಳಿಗೆ ಅನುಸಾರವಾಗಿ ಮ್ಯಾಕ್ರನ್ ಈಗ ಏಳು ದಿನಗಳವರೆಗೆ ಸ್ವಯಂ ಐಸೋಲೇಷನ್ ನಲ್ಲಿದ್ದು, ಕೆಲಸ ಮುಂದುವರೆಸುತ್ತಾರೆ. ಆಡಳಿತಾತ್ಮಕ ಚಟುವಟಿಕೆಗಳನ್ನು ದೂರದಿಂದಲೇ ನಿರ್ವಹಿಸುತ್ತಾರೆ ಎಂದು ಹೇಳಲಾಗಿದೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್,  ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ವಿಶ್ವದಾದ್ಯಂತ ಅನೇಕ ಸರ್ಕಾರದ ಮುಖ್ಯಸ್ಥರು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಇದೀಗ ಫ್ರೆಂಚ್ ಅಧ್ಯಕ್ಷರು ಸಹ ಅವರ ಪಟ್ಟಿಗೆ ಸೇರಿದ್ದಾರೆ.

ಫ್ರಾನ್ಸ್ ನಲ್ಲಿ ಕೊರೋನಾವೈರಸ್ ಎರಡನೇ ಅಲೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಈ ವಾರದ ಆರಂಭದಿಂದಲೂ ನಿರ್ಬಂಧ ಹೇರಲಾಗಿದೆ. ಆದರೆ, ಸೋಂಕಿನ ಪ್ರಕರಣಗಳು ಹೆಚ್ಚುತ್ತಲೇ ಸಾಗಿದೆ. 

ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ರೆಸ್ಟೋರೆಂಟ್ ಗಳು, ಚಿತ್ರಮಂದಿರಗಳು ಮುಚ್ಚಿರುವಂತೆಯೇ, ದೇಶಾದ್ಯಂತ 8 ಗಂಟೆಯಿಂದ ಇಡೀ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com