ಸಂಸತ್ತನ್ನು ವಿಸರ್ಜಿಸಲು ನೇಪಾಳ ಪಿಎಂ ಒಲಿ ಶಿಫಾರಸು

ನೇಪಾಳ ಪ್ರಧಾನಿ ಕೆ ಪಿ ಶರ್ಮಾ ಒಲಿ ಅವರು ಭಾನುವಾರ ನಡೆದ ತುರ್ತು ಸಂಪುಟ ಸಭೆಯಲ್ಲಿ ಸಂಸತ್ತನ್ನು ವಿಸರ್ಜಿಸಲು ಶಿಫಾರಸು ಮಾಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ನೇಪಾಳ ಪಿಎಂ ಒಲಿ
ನೇಪಾಳ ಪಿಎಂ ಒಲಿ

ಕಠ್ಮಂಡು: ನೇಪಾಳ ಪ್ರಧಾನಿ ಕೆ ಪಿ ಶರ್ಮಾ ಒಲಿ ಅವರು ಭಾನುವಾರ ನಡೆದ ತುರ್ತು ಸಂಪುಟ ಸಭೆಯಲ್ಲಿ ಸಂಸತ್ತನ್ನು ವಿಸರ್ಜಿಸಲು ಶಿಫಾರಸು ಮಾಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಆಡಳಿತಾರೂಢ ನೇಪಾಳ ಕಮ್ಯುನಿಸ್ಟ್ ಪಕ್ಷದ ಉನ್ನತ ನಾಯಕತ್ವ ಮತ್ತು ಸಚಿವರೊಂದಿಗೆ ಶನಿವಾರ ನಡೆದ ಸರಣಿ ಸಭೆಗಳ ನಂತರ ಓಲಿ ಅವರು ಮಂತ್ರಿ ಮಂಡಲದ ತುರ್ತು ಸಭೆ ಕರೆದಿದ್ದಾರೆ ಎಂದು ಹಿಮಾಲಯನ್ ಟೈಮ್ಸ್ ವರದಿ ಮಾಡಿದೆ.

"ಇಂದಿನ ಕ್ಯಾಬಿನೆಟ್ ಸಭೆಯು ಸಂಸತ್ತನ್ನು ವಿಸರ್ಜಿಸಲು ರಾಷ್ಟ್ರಪತಿಗೆ ಶಿಫಾರಸು ಮಾಡಲು ನಿರ್ಧರಿಸಿದೆ" ಎಂದು ಇಂಧನ ಸಚಿವ ಬರ್ಸಮನ್ ಪುನ್ ಅವರನ್ನು ಉಲ್ಲೇಖಿಸಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

ಶಿಫಾರಸನ್ನು ಈಗ ಅನುಮೋದನೆಗಾಗಿ ಅಧ್ಯಕ್ಷ ಬಿದ್ಯಾ ದೇವಿ ಭಂಡಾರಿ ಅವರಿಗೆ ಕಳುಹಿಸಲಾಗುವುದು ಎಂದು ವರದಿಗಳು ತಿಳಿಸಿವೆ.

ಮಾಜಿ ಪ್ರಧಾನಿ ಪುಷ್ಪಾ ಕಮಲ್ ದಹಲ್ ಪ್ರಚಂಡ ಅವರೊಂದಿಗಿನ ಭಿನ್ನಾಭಿಪ್ರಾಯಗಳ ನಡುವೆ ಒಲಿಯವರ ಈ ಕ್ರಮ ಕುತೂಹಲಕ್ಕೆ ಕಾರಣವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com