ಪಾಕಿಸ್ತಾನ: ಹಫೀಜ್​ ಸಯೀದ್​ಗೆ ಮತ್ತೊಂದು ಪ್ರಕರಣದಲ್ಲಿ 15 ವರ್ಷ ಜೈಲು ಶಿಕ್ಷೆ

ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜಮಾತ್​​-ಉದ್​-ದಾವಾ ಸಂಘಟನೆಯ ಮುಖ್ಯಸ್ಥ ಹಫೀಜ್​ ಸಯೀದ್​ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ​ ಮತ್ತೊಂದು ಪ್ರಕರಣದಲ್ಲಿ 15 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಹಫೀಜ್ ಸಯೀದ್
ಹಫೀಜ್ ಸಯೀದ್

ಲಾಹೋರ್: ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜಮಾತ್​​-ಉದ್​-ದಾವಾ ಸಂಘಟನೆಯ ಮುಖ್ಯಸ್ಥ ಹಫೀಜ್​ ಸಯೀದ್​ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ​ ಮತ್ತೊಂದು ಪ್ರಕರಣದಲ್ಲಿ 15 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸಿನ ನೆರವು ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 15 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. 

70 ವರ್ಷದ ಹಫೀಜ್​ ಸಯೀದ್​ಗೆ ಈಗಾಗಲೇ ನಾಲ್ಕು ಪ್ರಕರಣಗಳಲ್ಲಿ ಕೋರ್ಟ್​ 21 ವರ್ಷ ಜೈಲು ಶಿಕ್ಷೆ ನೀಡಿದೆ. ಈಗ ಮತ್ತೆ 15 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸಿನ ನೆರವು ನೀಡಿದ ಒಟ್ಟು ಐದು ಪ್ರಕರಣಗಳಲ್ಲಿ 36 ವರ್ಷ ಜೈಲು ಶಿಕ್ಷೆಯಾಗಿದೆ.

ಸದ್ಯ ಲಾಹೋರ್ ಜೈಲಿನಲ್ಲಿರುವ ಹಫೀಜ್​ ವಿರುದ್ಧ ಒಟ್ಟು 41 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 25 ಪ್ರಕರಣಗಳು ಈಗಾಗಲೇ ಇತ್ಯರ್ಥಗೊಂಡಿವೆ. ಇನ್ನು ಉಳದಿ ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, ಶೀಘ್ರವೇ ತೀರ್ಪು ಹೊರ ಬರಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com