ವಿಡಿಯೋ ಲೈವ್ ಮಾಡಿ ಶಾಪಿಂಗ್ ಮಾಲ್‍ನಲ್ಲಿ ಯೋಧನಿಂದ ಗುಂಡಿನ ದಾಳಿ, 17 ಮಂದಿ ಬಲಿ!

ಯೋಧನೊಬ್ಬ ಶಾಪಿಂಗ್ ಮಾಲ್‍ನಲ್ಲಿ ಗುಂಡಿನ ದಾಳಿ ನಡೆಸಿದ್ದು ಪರಿಣಾಮ 17 ಮಂದಿ ಸಾವನ್ನಪ್ಪಿ 14 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬ್ಯಾಂಕಾಕ್: ಯೋಧನೊಬ್ಬ ಶಾಪಿಂಗ್ ಮಾಲ್‍ನಲ್ಲಿ ಗುಂಡಿನ ದಾಳಿ ನಡೆಸಿದ್ದು ಪರಿಣಾಮ 17 ಮಂದಿ ಸಾವನ್ನಪ್ಪಿ 14 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. 

ಥಾಯ್ಲೆಂಡ್ ನ ಕೊರತ್ ನ ಶಾಪಿಂಗ್ ಮಾಲ್‍ನಲ್ಲಿ ಸಾರ್ಜೆಂಟ್-ಮೇಜರ್ ಜಕ್ರಪಂತ್ ಥೊಮ್ಮ ಎಂಬ ಯೋಧ ಗುಂಡಿನ ದಾಳಿ ನಡೆಸಿದ್ದಾನೆ. ಪರಿಣಾಮ 17 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನು ಥೊಮ್ಮ ತಮ್ಮ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಮತ್ತು ಫೋಟೋಗಳು ಹಂಚಿಕೊಂಡಿದ್ದಾನೆ. ಜೊತೆಗೆ ನಾನು ಶರಣಾಗಬೇಕೇ? ಯಾರೂ ಸಾವಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾನೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com