ಕೊರೋನಾ ವೈರಸ್: ಚೀನಾದಲ್ಲಿ ಸಾವಿನ ಸಂಖ್ಯೆ 1,400ಕ್ಕೆ ಏರಿಕೆ, 5,090 ಮಂದಿಯಲ್ಲಿ ಮತ್ತೆ ಸೋಂಕು ಪತ್ತೆ

ಈಗಾಗಲೇ ಸಹಸ್ರಾರು ಮಂದಿಯನ್ನು ಬಲಿ ಪಡೆದುಕೊಂಡಿರುವ ಮಹಾಮಾರಿ ಕೊರೋನಾ ವೈರಸ್ ಚೀನಾದಲ್ಲಿ ಮತ್ತಷ್ಟು ವ್ಯಾಪಕವಾಗಿ ಹಬ್ಬುತ್ತಿದ್ದು, ಒಂದೇ ದಿನ ಬರೋಬ್ಬರಿ 121 ಮಂದಿ ಇಹಲೋಕ ತ್ಯಜಿಸಿದ್ದಾರೆ.ಇದರಿಂದ ಮೃತಪಟ್ಟವರ ಸಂಖ್ಯೆ 1400ಕ್ಕೆ ಏರಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೀಜಿಂಗ್: ಈಗಾಗಲೇ ಸಹಸ್ರಾರು ಮಂದಿಯನ್ನು ಬಲಿ ಪಡೆದುಕೊಂಡಿರುವ ಮಹಾಮಾರಿ ಕೊರೋನಾ ವೈರಸ್ ಚೀನಾದಲ್ಲಿ ಮತ್ತಷ್ಟು ವ್ಯಾಪಕವಾಗಿ ಹಬ್ಬುತ್ತಿದ್ದು, ಒಂದೇ ದಿನ ಬರೋಬ್ಬರಿ 121 ಮಂದಿ ಇಹಲೋಕ ತ್ಯಜಿಸಿದ್ದಾರೆ.ಇದರಿಂದ ಮೃತಪಟ್ಟವರ ಸಂಖ್ಯೆ 1400ಕ್ಕೆ ಏರಿಕೆಯಾಗಿದೆ. 

ಒಂದೇ ದಿನ 5,090 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 63,851ಕ್ಕೆ ಏರಿಕೆಯಾಗಿದೆ. ಸಾಮಾನ್ಯವಾಗಿ ಪ್ರತಿನಿತ್ಯ ಸರಾಸರಿ 80 ಜನರಂತೆ ಕೊರೋನಾ ಪೀಡಿತರು ಚೀನಾದಲ್ಲಿ ಮರಣ ಹೊಂದುತ್ತಿದ್ದರು. ಆದರೆ, ಇದೇ ಮೊದಲ ಬಾರಿದೆ 121 ಮಂದಿ ಒಂದೇ ದಿನ ಸಾವನ್ನಪ್ಪಿದ್ದಾರೆ. ಈ ಎಲ್ಲಾ ಸಾವುಗಳು ಹುಬೆ ಪ್ರಾಂತ್ಯದಲ್ಲೇ ವರದಿಯಾಗಿದೆ. 

ಈ ನಡುವೆ ಸಾಕಷ್ಟು ಕ್ರಮಗಳ ನಡವೆಯೂ ಕೊರೋನಾ ಹತ್ತಿಕ್ಕಲು ಚೀನಾ ವಿಫಲವಾಗಿರುವಾಗಲೇ, ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ ಹುಬೆ ಪ್ರಾಂತ್ಯದ ತನ್ನ ಮುಖ್ಯಸ್ಥ ಜಿಯಾಂಗ್ ಚಾವೋಲಿಯಾಂಗ್ ಅವರನ್ನು ಕಿತ್ತೊಗೆಯಲಾಗಿದೆ. 

ಕೊರೋನಾ ವೈರಸ್ ವೊದು ಜಾತಿಯ ವೈರಸ್ ಆಗಿದೆ. ಸೂಕ್ಷ್ಮ ದರ್ಶಕದಲ್ಲಿ ಇದು ಕಿರೀಟ ರೀತಿ ಕಾಣಿಸುತ್ತದೆ. ಲ್ಯಾಟಿನ್ ಭಾಷೆಯಲ್ಲಿ ಕೊರೋನಾ ಎಂದರೆ ಕಿರೀಟ ಎಂದರ್ಥ. ಹೀಗಾಗಿ ವೈರಸ್'ಗೆ ಕೊರೋನಾ ಹೆಸರು. ಚೀನಾದ ವುಹಾನ್ ನಗರದಲ್ಲಿನ ಅಕ್ರಮ ವನ್ಯ ಜೀವಿ ಮಾಂಸ ಕೇಂದ್ರದ ಮೂಲಕ ಮಾನವರಿಗೆ ವೈರಸ್ ತಗುಲಿದೆ. ವೈರಸ್ ಒಂಟೆ, ಬೆಕ್ಕು, ಬಾವಲಿ ಸೇರಿದಂತೆ ಹಲವಾರು ಪ್ರಾಣಿಗಳಲ್ಲೂ ಪ್ರವೇಶಿಸುತ್ತಿದೆ. ಪ್ರಾಣಿಗಳ ದೇಹ ಸೇರಿದ ಈ ವೈರಸ್ ಅಪರೂಪ ಎಂಬಂತೆ ಮನುಷ್ಯರ ದೇಹವನ್ನೂ ಸೇರುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com