26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ ಮೊನ್ನೆ ಜೈಲು, ಶೀಘ್ರವೇ ಬಿಡುಗಡೆಯ ಭಾಗ್ಯ!?

ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರನೆಂಬ ಹಣೆಪಟ್ಟಿ ಹೊತ್ತಿರುವ 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ ಪಾಕಿಸ್ತಾನದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು.

Published: 15th February 2020 12:16 PM  |   Last Updated: 15th February 2020 12:16 PM   |  A+A-


26/11 mastermind Hafiz Saeed may be released after FATF verdict, say sources

26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ ಮೊನ್ನೆ ಜೈಲು, ಶೀಘ್ರವೇ ಬಿಡುಗಡೆಯ ಭಾಗ್ಯ!?

Posted By : Srinivas Rao BV
Source : Online Desk

ಇಸ್ಲಾಮಾಬಾದ್: ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರನೆಂಬ ಹಣೆಪಟ್ಟಿ ಹೊತ್ತಿರುವ 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ ಪಾಕಿಸ್ತಾನದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ಈಗ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆ (ಎಫ್‌ಎಟಿಎಫ್‌) ತೀರ್ಪಿನ ನಂತರ ಆತನನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. 

ಫೆ.16 ರಂದು ಪ್ಯಾರಿಸ್ ನಲ್ಲಿ ನಡೆಯಲಿರುವ ಎಫ್ಎಟಿಎಫ್ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆ ಬೇಡವೇ ಎಂಬ ಬಗ್ಗೆ ತೀರ್ಮಾನಿಸಲಿದೆ.  ಎಫ್ಎಟಿಎಫ್ ನ ಒತ್ತಡದಿಂದಾಗಿ ಪಾಕಿಸ್ತಾನದ ನ್ಯಾಯಾಲಯ ಹಫೀಜ್ ಸಯೀದ್ ಗೆ ಭಯೋತ್ಪಾದನೆಗೆ ಸಂಬಂಧಿಸಿದಂತೆ ಜೈಲು ಶಿಕ್ಷೆ ವಿಧಿಸಿದೆ. ಎಫ್ಎಟಿಎಫ್ ಪಾಕಿಸ್ತಾನದ ವಿಷಯದಲ್ಲಿ ತೀರ್ಮಾನ ಕೈಗೊಂಡ ನಂತರ ಪಾಕ್ ನ ಭಯೋತ್ಪಾದನೆ ನಿಗ್ರಹ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಹಫೀಜ್ ಸಯೀದ್ ನ ವಕೀಲರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಹಫೀಜ್ ಸಯೀದ್ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. 

Stay up to date on all the latest ಅಂತಾರಾಷ್ಟ್ರೀಯ news with The Kannadaprabha App. Download now
facebook twitter whatsapp