ಕೊರೋನಾ ವೈರಸ್: ಸಾವಿನ ಸಂಖ್ಯೆ 2004ಕ್ಕೆ ಏರಿಕೆ 

ಚೀನಾದಲ್ಲಿ ಮಹಾಮಾರಿ ಕೊರೋನಾ ವೈರಸ್ ಮರಣ ಮೃದಂಗವನ್ನು ಮುಂದುವರೆಸಿದ್ದು, ಸಾವಿನ ಸಂಖ್ಯೆ 2004ಕ್ಕೆ ಏರಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೀಜಿಂಗ್: ಚೀನಾದಲ್ಲಿ ಮಹಾಮಾರಿ ಕೊರೋನಾ ವೈರಸ್ ಮರಣ ಮೃದಂಗವನ್ನು ಮುಂದುವರೆಸಿದ್ದು, ಸಾವಿನ ಸಂಖ್ಯೆ 2004ಕ್ಕೆ ಏರಿಕೆಯಾಗಿದೆ. 

ಮಾರಕ ಕೊರೋನಾ ವೈರಸ್'ಗೆ 24 ಗಂಟೆಗಳಲ್ಲಿ ಒಟ್ಟು 136 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. ಈ ನಡುವೆ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 14,376 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 

ಈ ನಡುವೆ ಚೀನಾದ ಒಟ್ಟು 31 ಪ್ರಾಂತ್ಯಗಳಲ್ಲಿ 74,185 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದು ದೃಢಪಟ್ಟಿದೆ ಎಂದು ಚೀನಾದ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

ಕೊರೋನಾ ವೈರಸ್'ಗೆ ಚೀನಾದ ವುಹಾನ್'ನ ಆಸ್ಪತ್ರೆಯೊಂದರ ನಿರ್ದೇಶಕರೇ ಬಲಿಯಾಗಿದ್ದಾರೆಂದು ತಿಳಿದುಬಂದಿದೆ. 

ವುಹಾನ್'ನ ವುಚಾಂಗ್ ಆಸ್ಪತ್ರೆಯ ಲ್ಯುಝಿಮಿಂಗ್ ಮಂಗಳವಾರ ಬೆಳಿಗ್ಗೆ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದೂವರೆಗೆ ಚೀನಾದಲ್ಲಿ 1716ವೈದ್ಯಕೀಯ ಸಿಬ್ಬಂದಿ ಸೋಂಕಿಗೆ ತುತ್ತಾಗಿದ್ದು, 6 ಜನ ಸಾವನ್ನಪ್ಪಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com