ಜರ್ಮನಿಯಲ್ಲಿ ಗುಂಡಿನ ದಾಳಿ: 8 ಸಾವು, ಹಲವರಿಗೆ ಗಂಭೀರ ಗಾಯ

ಜರ್ಮನಿಯ ಹನೌ ಟೌನ್ ನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನೆಡಸಿದ್ದು, ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿ, ಹಲವಾರು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. 
ಜರ್ಮನಿಯಲ್ಲಿ ಗುಂಡಿನ ದಾಳಿ: 8 ಸಾವು, ಹಲವರಿಗೆ ಗಂಭೀರ ಗಾಯ
ಜರ್ಮನಿಯಲ್ಲಿ ಗುಂಡಿನ ದಾಳಿ: 8 ಸಾವು, ಹಲವರಿಗೆ ಗಂಭೀರ ಗಾಯ

ಬರ್ಲಿನ್: ಜರ್ಮನಿಯ ಹನೌ ಟೌನ್ ನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನೆಡಸಿದ್ದು, ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿ, ಹಲವಾರು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. 

ಇಬ್ಬರು ಮುಸುಧಾರಿ ವ್ಯಕ್ತಿಗಳು ಹನೌನ್ ಟೌನ್ ನಲ್ಲಿರುವ ಶಿಶಾ ಬಾರ್ ಬಳಿ ಸಾಮೂಹಿಕವಾಗಿ ಗುಂಡಿನ ದಾಳಿ ನಡೆಸಿದ್ದು, ಗುಂಡಿನ ದಾಳಿ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. 

ದಾಳಿಗೆ ಕಾರಣಗಳು ತಿಳಿದುಬಂದಿಲ್ಲ. ದಾಳಿಯ ಹೊಣೆಯನ್ನು ಯಾವುದೇ ಉಗ್ರ ಸಂಘಟನೆಗಳೂ ಕೂಡ ಒಪ್ಪಿಕೊಂಡಿಲ್ಲ. ಪ್ರಸ್ತುತ ಸ್ಥಳಕ್ಕಾಗಮಿಸಿರುವ ಭದ್ರತಾ ಸಿಬ್ಬಂದಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ತನಿಖೆ ಆರಂಭಿಸಿದೆ ಎಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com