ಕೊರೊನಾ ಸೋಂಕು: ಚೀನಾದಲ್ಲಿ ಸಾವಿನ ಸಂಖ್ಯೆ 2345 ಕ್ಕೆ ಏರಿಕೆ

ಚೀನಾದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕಿಗೆ 2345 ಜನರು ಬಲಿಯಾಗಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಶನಿವಾರ ತಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೀಜಿಂಗ್: ಚೀನಾದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕಿಗೆ 2345 ಜನರು ಬಲಿಯಾಗಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಶನಿವಾರ ತಿಳಿಸಿದೆ.

ಚೀನಾದ 31 ಪ್ರಾಂತ್ಯಗಳಲ್ಲಿ ಸೋಂಕಿತರ ಸಂಖ್ಯೆ 76288 ರಷ್ಟಿದೆ. ಈ ಪೈಕಿ 53284 ಜನರು ಇನ್ನೂ ಗುಣಮುಖರಾಗಿಲ್ಲ. 11477 ಜನರ ಸ್ಥಿತಿ ಗಂಭೀರವಾಗಿದ್ದು 2345 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. 20659 ಜನರು ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ವಾಪಸ್ ಕಳುಹಿಸಲಾಗಿದೆ ಎಂದು ಆಯೋಗದ ಹೇಳಿಕೆ ತಿಳಿಸಿದೆ.

ಕೊರೋನಾ ವೈರಸ್ ವೊದು ಜಾತಿಯ ವೈರಸ್ ಆಗಿದೆ. ಸೂಕ್ಷ್ಮ ದರ್ಶಕದಲ್ಲಿ ಇದು ಕಿರೀಟ ರೀತಿ ಕಾಣಿಸುತ್ತದೆ. ಲ್ಯಾಟಿನ್ ಭಾಷೆಯಲ್ಲಿ ಕೊರೋನಾ ಎಂದರೆ ಕಿರೀಟ ಎಂದರ್ಥ. ಹೀಗಾಗಿ ವೈರಸ್'ಗೆ ಕೊರೋನಾ ಹೆಸರು. ಚೀನಾದ ವುಹಾನ್ ನಗರದಲ್ಲಿನ ಅಕ್ರಮ ವನ್ಯ ಜೀವಿ ಮಾಂಸ ಕೇಂದ್ರದ ಮೂಲಕ ಮಾನವರಿಗೆ ವೈರಸ್ ತಗುಲಿದೆ.

ವಿಶ್ವ ಆರೋಗ್ಯ ಸಂಸ್ಥೆ ಅನ್ವಯ ಕೊರೋನಾ ವೈರಸ್ ಸೀ-ಫುಡ್ ಗೆ ಸಂಬಂಧಿಸಿದ್ದಾಗಿದೆ ಎಂದು ಹೇಳಲಾಗುತ್ತಿದೆ. ವಿಷಾಣುಗಳ ವರ್ಗಕ್ಕೆ ಸೇರಿದ ಈ ಕೊರೋನಾ ವೈರಸ್ ನಿಂದ ಜನರು ರೋಗಕ್ಕೀಡಾಗುತ್ತಿದ್ದು, ಜೀವ ಕಳೆದುಕೊಳ್ಳುತ್ತಿದ್ದಾರೆ. 

ವೈರಸ್ ಒಂಟೆ, ಬೆಕ್ಕು, ಬಾವಲಿ ಸೇರಿದಂತೆ ಹಲವಾರು ಪ್ರಾಣಿಗಳಲ್ಲೂ ಪ್ರವೈಶಿಸುತ್ತಿದೆ. ಪ್ರಾಣಿಗಳ ದೇಹ ಸೇರಿದ ಈ ವೈರಸ್ ಅಪರೂಪ ಎಂಬಂತೆ ಮನುಷ್ಯರ ದೇಹವನ್ನೂ ಸೇರುತ್ತಿದೆ. 

ಸೋಂಕು ತಗುಲಿದವರಿಗೆ ತೀವ್ರ ಶೀತ, ಕೆಮ್ಮು, ಗಂಟಲು ಕಟ್ಟುವಿಕೆ, ಉಸಿರಾಟದ ತೊಂದರೆ, ತಲೆನೋವು, ಜ್ವರದ ಸಮಸ್ಯೆಗಳು ಉಂಟಾಗುತ್ತವೆ. ಬಳಿಕ ಇದು ನ್ಯೂಮೋನಿಯಾ ಹಾಗೂ ಕಿಡ್ನಿಗಳಿಗೆ ಹಾನಿಯುಂಟು ಮಾಡುತ್ತದೆ. ಕೊರೋನಾ ವೈರಸ್ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗ ಕೂಡ ಆಗಿದ್ದು, ವೈರಸ್ ಹರಡದಂತೆ ಅದನ್ನು ನಿಯಂತ್ರಣದಲ್ಲಿಡಲು ಹಾಗೂ ತಡೆಗಟ್ಟಲು ಇಡೀ ವಿಶ್ವವೇ ಹರಸಾಹಸ ಪಡುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com