ದೆಹಲಿ ಹಿಂಸಾಚಾರಕ್ಕೆ ಆರ್ ಎಸ್ಎಸ್, ಬಿಜೆಪಿ ಕಾರಣ: ಪಾಕ್ ಪ್ರಧಾನಿ ಇಮ್ರಾನ್ ಖಾನ್

23 ಮಂದಿಯನ್ನು ಬಲಿ ಪಡೆದ ದೆಹಲಿ ಕೋಮುಗಲಭೆಗೆ ಆರ್ ಎಸ್ಎಸ್ ಮತ್ತು ಬಿಜೆಪಿಯೇ ನೇರ ಹೊಣೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಬುಧವಾರ ಆರೋಪಿಸಿದ್ದಾರೆ.
ಇಮ್ರಾನ್ ಖಾನ್
ಇಮ್ರಾನ್ ಖಾನ್

ನವದೆಹಲಿ: 23 ಮಂದಿಯನ್ನು ಬಲಿ ಪಡೆದ ದೆಹಲಿ ಕೋಮುಗಲಭೆಗೆ ಆರ್ ಎಸ್ಎಸ್ ಮತ್ತು ಬಿಜೆಪಿಯೇ ನೇರ ಹೊಣೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಬುಧವಾರ ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರ ಭಾರತದಲ್ಲಿರುವ 20 ಕೋಟಿ ಮುಸ್ಲಿಮರನ್ನು ಟಾರ್ಗೆಟ್ ಮಾಡುತ್ತಿದೆ. ಹೀಗಾಗಿ ಭಾರತೀಯ ಮುಸ್ಲಿಮರನ್ನು ರಕ್ಷಿಸಬೇಕು ಎಂದು ಇಮ್ರಾನ್ ಖಾನ್ ಅವರು ವಿಶ್ವ ಸಮುದಾಯಕ್ಕೆ ಮನವಿ ಮಾಡಿದ್ದಾರೆ.

ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡಿರುವ ಇಮ್ರಾನ್ ಖಾನ್ ಅವರು, "ಇಂದು ಭಾರತದಲ್ಲಿ ನಾಜಿ-ಪ್ರೇರಿತ ಆರ್‌ಎಸ್‌ಎಸ್ ಸಿದ್ಧಾಂತವು ಒಂದು ಶತಕೋಟಿಗೂ ಹೆಚ್ಚು ಜನರ ಪರಮಾಣು-ಸಶಸ್ತ್ರ ರಾಜ್ಯವನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ದ್ವೇಷವನ್ನು ಆಧರಿಸಿದ ಜನಾಂಗೀಯ ಸಿದ್ಧಾಂತವನ್ನು ಕೈಗೆತ್ತಿಕೊಂಡಾಗಲೆಲ್ಲಾ ಅದು ರಕ್ತಪಾತಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಕಳೆದ ವರ್ಷ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ತಾವು ಮಾಡಿದ್ದ ಭಾಷಣವನ್ನು ನೆನಪಿಸಿಕೊಂಡ ಪಾಕ್ ಪ್ರಧಾನಿ, ಬಿಜೆಪಿ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದಾಗಲೇ ಭಾರತದಲ್ಲಿ ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹೇಳಿದ್ದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com