ಇರಾನ್ ಸೇನಾ ಕಮಾಂಡರ್ ಸೊಲೈಮಾನಿ ಅಂತಿಮ ಯಾತ್ರೆ ವೇಳೆ ಕಾಲ್ತುಳಿತ, ಕನಿಷ್ಠ 35 ಸಾವು!

ಅಮೆರಿಕ ಸೇನೆಯ ಕ್ಷಿಪಣಿ ದಾಳಿಯಲ್ಲಿ ಮೃತರಾದ ಇರಾನ್ ಸೇನಾ ಕಮಾಂಡರ್ ಖಾಸಿಮ್ ಸೊಲೈಮಾನಿ ಅವರ ಪಾರ್ಥೀವ ಶರೀರದ ಅಂತಿಮ ಯಾತ್ರೆ ವೇಳೆ ಭಾರಿ ಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 35 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸೊಲೈಮಾನಿ ಅಂತಿಮ ಯಾತ್ರೆ
ಸೊಲೈಮಾನಿ ಅಂತಿಮ ಯಾತ್ರೆ

ಬಾಗ್ದಾದ್: ಅಮೆರಿಕ ಸೇನೆಯ ಕ್ಷಿಪಣಿ ದಾಳಿಯಲ್ಲಿ ಮೃತರಾದ ಇರಾನ್ ಸೇನಾ ಕಮಾಂಡರ್ ಖಾಸಿಮ್ ಸೊಲೈಮಾನಿ ಅವರ ಪಾರ್ಥೀವ ಶರೀರದ ಅಂತಿಮ ಯಾತ್ರೆ ವೇಳೆ ಭಾರಿ ಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 35 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಇರಾನ್ ಸರ್ಕಾರಿ ಸ್ವಾಮ್ಯದ ಟಿವಿ ವರದಿ ಬಿತ್ತರಿಸಿದ್ದು, ಸೊಲೈಮಾನಿ ಅವರ ಜನ್ಮಸ್ಥಳ ಕೆರ್ಮಾನ್ ನಲ್ಲಿ ಅವರ ಅಂತಿಮ ವಿಧಿವಿಧಾನ ಕಾರ್ಯ ನೆರವೇರುತ್ತಿದ್ದು, ಈ ವೇಳೆ ಸೊಲೈಮಾನಿ ಅವರ ಪಾರ್ಥೀವ ಶರೀರರವನ್ನು ಮೆರವಣಿಗೆ ಮೂಲಕ ತರಲಾಗುತ್ತಿದೆ. ಮೆರವಣಿಗೆಯಲ್ಲಿ ಲಕ್ಷಾಂತರ ಮಂದಿ ಪಾಲ್ದೊಂಡಿದ್ದು, ನೆರೆದಿದ್ದ ಜನರು ಸೊಲೈಮಾನಿ ಅವರಿಗೆ ಅಶ್ರುತರ್ಪಣ ನೀಡಿದರು. ಅಲ್ಲದೆ ಸೊಲೈಮಾನಿ ಮತ್ತು ಇರಾನ್ ಪರ ಘೋಷಣೆಗಳನ್ನು ಕೂಗಿದ ಬೆಂಬಸಿದರು, ಅಮೆರಿಕದ ವಿರುದ್ಧ ಘೋಷಣೆ ಕೂಗಿದರು.

ಇದೇ ಸಂದರ್ಭದಲ್ಲೇ ಶವಯಾತ್ರೆಯಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ವೇಳೆ ಕನಿಷ್ಠ 35 ಮಂದಿ ಸಾವನ್ನಪ್ಪಿ, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. 

ಸೊಲೈಮಾನಿ ಇರಾನ್ ಖುರ್ದಿಷ್ ಸೇನಾ ಮುಖ್ಯಸ್ಥರಾಗಿದ್ದು, ಇಸ್ಲಾಮಿಕ್ ಸ್ಟೇಟ್ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಇರಾನ್ ಸೇನೆ ಮೇಲುಗೈ ಸಾಧಿಸಲು ಪ್ರಮುಖ ಪಾತ್ರ ವಹಿಸಿದ್ದರು. ಇತ್ತೀಚೆಗಷ್ಟೇ ಅಮೆರಿಕ ಮತ್ತು ಇರಾನ್ ನಡುವಿನ ಶೀಥಲ ಸಮರ ತಾರಕಕ್ಕೇರಿದ್ದ ಸಂದರ್ಭದಲ್ಲಿ ಸೊಲೈಮಾನಿ ಅಮೆರಿಕದ ಸರ್ವನಾಶ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಕುರಿತು ಪ್ರಚೋಧನಾತ್ಮಕ ಹೇಳಿಕೆ ನೀಡಿದ್ದರು. ಆದರೆ ಕಳೆದವಾರ ಬಾಗ್ದಾದ್ ವಿಮಾನ ನಿಲ್ದಾಣದ ಬಳಿ ಸೊಲೈಮಾನಿ ಸಂಚರಿಸುತ್ತಿದ್ದ ವಾಹನಗಳ ಮೇಲೆ ಅಮೆರಿಕ ಸೇನೆ ಕ್ಷಿಪಣಿ ದಾಳಿ ಮಾಡಿ ಅವರನ್ನು ಕೊಂದು ಹಾಕಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com