ಸುಡಾನ್ ನಲ್ಲಿ ಗ್ರೆನೇಡ್ ಸ್ಫೋಟ: ಕನಿಷ್ಠ 7 ಸಾವು, 40 ಜನರಿಗೆ ಗಾಯ 

ಸುಡಾನ್ ರಾಜಧಾನಿ ಖಾರ್ಟೌಮ್ ನಲ್ಲಿ ಅಪರಿಚಿತರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಛ 7 ಮಂದಿ ಸಾವನ್ನಪ್ಪಿದ್ದು, 40 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಾಸ್ಕೋ: ಸುಡಾನ್ ರಾಜಧಾನಿ ಖಾರ್ಟೌಮ್ ನಲ್ಲಿ ಅಪರಿಚಿತರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಕನಿಷ್ಛ 7 ಮಂದಿ ಸಾವನ್ನಪ್ಪಿದ್ದು, 40 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಸುಡಾನ್ ಆರೋಗ್ಯ ಇಲಾಖೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು,  ಸುಡಾನ್ ರಾಜಧಾನಿ ಖಾರ್ಟೌಮ್ ನ ಶೇಗ್ಲಾ ಪ್ರಾಂತ್ಯದಲ್ಲಿನ ಅಲ್ ಹಜ್ ಯೂಸೆಫ್ ಜಿಲ್ಲೆಯಲ್ಲಿ ಸ್ಫೋಟ ನಡೆದಿದೆ. ಪರಿಣಾಮ ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 40 ಜನರು ಗಾಯಗೊಂಡಿದ್ದಾರೆ. ಈ ಪೈಕಿ ಮಕ್ಕಳು ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಇಲ್ಲಿನ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ ಎಂದು ಸೌದಿ ಅಲ್ ಅರೇಬಿಯಾ ಟಿವಿ ಚಾನೆಲ್ ವರದಿ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com