ಕೊರೋನಾ ವೈರಸ್'ಗೆ ಮತ್ತೆ 25 ಮಂದಿ ಬಲಿ, ಇನ್ನೂ 830 ಮಂದಿಯಲ್ಲಿ ವೈರಾಣು ಪತ್ತೆ: ಚೀನಾ ಸರ್ಕಾರ

ವಿಶ್ವದ ಎರಡನೇ ಅತೀದೊಡ್ಡ ಆರ್ಥಿಕತೆಗೆ ಹೆಸರಾಗಿರುವ ಚೀನಾಗೆ ಇದೀಗ ಕೊರೋನಾ ವೈರಸ್ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದು, ಮಾರಕ ವೈರಸ್'ಗೆ ಮತ್ತೆ 25 ಮಂದಿ ಬಲಿಯಾಗಿದ್ದಾರೆ. ಇನ್ನೂ 830 ಮಂದಿಯಲ್ಲಿ ವೈರಾಣು ಪತ್ತೆಯಾಗಿದ ಎಂದು ಚೀನಾ ಸರ್ಕಾರ ಹೇಳಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೀಜಿಂಗ್: ವಿಶ್ವದ ಎರಡನೇ ಅತೀದೊಡ್ಡ ಆರ್ಥಿಕತೆಗೆ ಹೆಸರಾಗಿರುವ ಚೀನಾಗೆ ಇದೀಗ ಕೊರೋನಾ ವೈರಸ್ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದು, ಮಾರಕ ವೈರಸ್'ಗೆ ಮತ್ತೆ 25 ಮಂದಿ ಬಲಿಯಾಗಿದ್ದಾರೆ. ಇನ್ನೂ 830 ಮಂದಿಯಲ್ಲಿ ವೈರಾಣು ಪತ್ತೆಯಾಗಿದ ಎಂದು ಚೀನಾ ಸರ್ಕಾರ ಹೇಳಿದೆ. 

ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಚೀನಾ ಸರ್ಕಾರ ಕಂಡು ಕೇಳರಿಯದ ರೀತಿ ಎನ್ನಬಹುದಾದ ತುರ್ತು ಕ್ರಮಗಳನ್ನು ಘೋಷಣೆ ಮಾಡಿದೆ. 

830 ಮಂದಿಯಲ್ಲಿ ವೈರಾಣು ಕಂಡು ಬಂದಿದ್ದು, ಇದರಲ್ಲಿ 177 ಜನರ ಸ್ಥಿತಿ ಚಿಂತಾಜನಕವಾಗಿದೆ. ಸೋಂಕು ತಗುಲಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 34 ಮಂದಿ ಚಿಕಿತ್ಸೆ ಪಡೆದಿದ್ದು, ಇದೀಗ ಗುಣಮುಖರಾಗಿದ್ದಾರೆ. ಸಮುದ್ರ ಆಹಾರ ಮತ್ತು ಮಾಂಸಾಹಾರದಿಂದ ವುಹಾನ್ ನಲ್ಲಿ ಈ ವೈರಸ್ ಹರಡಿಸುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. 

ಜನಸಂಖ್ಯೆಯಲ್ಲಿ ಬೆಂಗಳೂರಿನ 2 ಪಟ್ಟು ಇರುವ ತನ್ನ ದೇಶದ 5 ನಗರಗಳಲ್ಲಿ ಬಂದ್ ರೀತಿಯ ವಾತಾವರಣ ಘೋಷಣೆ ಮಾಡಿದೆ. ಅಲ್ಲದೆ ಬೀಜಿಂಗ್ ನ ಐತಿಹಾಸಿಕ ಫಾರ್ ಬಿಡನ್ ಸಿಟಿಯನ್ನು ಮುಂದಿನ ಆದೇಶದವರೆಗೂ ಮುಚ್ಚಲು ಸರ್ಕಾರ ಆದೇಶ ನೀಡಿದೆ. 

ವುಹಾನ್, ಹುವಾಂಗ್ ಗಾಂಗ್, ಈಝೌ, ಝಿಜಿಯಾಂಗ್ ಮತ್ತು ಕ್ವಿಯಾನ್ ಜಿಯಾಂಗ್ ನಗರಗಳಲ್ಲಿ ಗುರುವಾರ ಸಂಜೆಯಿಂದಲೇ ಸಾರ್ವಜನಿಕ ಸಂಚಾರ ವ್ಯವಸ್ಥೆಯನ್ನು ಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಈ ಮೂಲಕ ವೈರಸ್ ಒಬ್ಬರಿಂದ ಇನ್ನೊಬ್ಬರಿಗೆ ಹಬ್ಬದಂತೆ ಭಾರೀ ಮುಂಜಾಗ್ರತೆ ವಹಿಸಿದೆ. ಪರಿಣಾಮ ಸದಾ ಜನಜಂಗುಳಿಯಿಂದ ತುಂಬಿರುತ್ತಿದ್ದ ವುಹಾನ್ ರಸ್ತೆಗಳಿ ಇದೀಗ ನಿರ್ಜನವಾಗಿವೆ. 

ಕೊರೋನಾ ವೈರಸ್ ವೊದು ಜಾತಿಯ ವೈರಸ್ ಆಗಿದೆ. ಸೂಕ್ಷ್ಮ ದರ್ಶಕದಲ್ಲಿ ಇದು ಕಿರೀಟ ರೀತಿ ಕಾಣಿಸುತ್ತದೆ. ಲ್ಯಾಟಿನ್ ಭಾಷೆಯಲ್ಲಿ ಕೊರೋನಾ ಎಂದರೆ ಕಿರೀಟ ಎಂದರ್ಥ. ಹೀಗಾಗಿ ವೈರಸ್'ಗೆ ಕೊರೋನಾ ಹೆಸರು. ಚೀನಾದ ವುಹಾನ್ ನಗರದಲ್ಲಿನ ಅಕ್ರಮ ವನ್ಯ ಜೀವಿ ಮಾಂಸ ಕೇಂದ್ರದ ಮೂಲಕ ಮಾನವರಿಗೆ ವೈರಸ್ ತಗುಲಿದೆ. ಸೋಂಕು ತಗುಲಿದವರು ತೀವ್ರ ಶೀತ, ಕೆಮ್ಮು, ಗಂಟಲು ಕಟ್ಟುವಿಕೆ, ಉಸಿರಾಟದ ತೊಂದರೆ, ತಲೆನೋವು, ಜ್ವರದ ಸಮಸ್ಯೆಗೆ ತುತ್ತಾಗುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com