ಪಾಕಿಸ್ತಾನದಲ್ಲಿ ಬಸ್ಸಿಗೆ ರೈಲು ಡಿಕ್ಕಿ, 29 ಸಿಖ್ ಯಾತ್ರಿಗಳು ಸಾವು

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಶುಕ್ರವಾರ ಮಿನಿ-ಬಸ್ ಗೆ ರೈಲು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಕನಿಷ್ಠ 29 ಪಾಕ್ ಸಿಖ್ ಯಾತ್ರಿಗಳು ಮೃತಪಟ್ಟಿದ್ದಾರೆ.

Published: 03rd July 2020 05:39 PM  |   Last Updated: 03rd July 2020 05:39 PM   |  A+A-


Accident

ಸಾಂದರ್ಭಿಕ ಚಿತ್ರ

Posted By : Lingaraj Badiger
Source : PTI

ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಶುಕ್ರವಾರ ಮಿನಿ-ಬಸ್ ಗೆ ರೈಲು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಕನಿಷ್ಠ 29 ಪಾಕ್ ಸಿಖ್ ಯಾತ್ರಿಗಳು ಮೃತಪಟ್ಟಿದ್ದಾರೆ.

ಇಂದು ಮಧ್ಯಾಹ್ನ 1.30ರ ಸುಮಾರಿಗೆ ಫಾರೂಖಾಬಾದ್ ನ ಮಾನವರಹಿತ ರೈಲ್ವೆ ಕ್ರಾಸ್‌ನಲ್ಲಿ ಈ ದುರಂತ ಸಂಭವಿಸಿದ್ದು, ಕರಾಚಿಯಿಂದ ಲಾಹೋರ್ ಗೆ ತೆರಳುತ್ತಿದ್ದ ಶಾಹ್ ಹುಸ್ಸೇನ್ ಎಕ್ಸ್‌ಪ್ರೆಸ್ ರೈಲು, ಸಿಖ್ ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದಲ್ಲಿ ಕನಿಷ್ಠ 29 ಮಂದಿ ಮೃತಪಟ್ಟಿದ್ದು, ಬಹುತೇಕರು ಪಾಕಿಸ್ತಾನದ ಸಿಖ್ ಯಾತ್ರಿಗಳಾಗಿದ್ದಾರೆ ಎಂದು ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ವಕ್ತಾರ ಹಮೀರ್ ಹಶ್ಮಿ ಅವರು ಪಿಟಿಐಗೆ ತಿಳಿಸಿದ್ದಾರೆ.

Stay up to date on all the latest ಅಂತಾರಾಷ್ಟ್ರೀಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp