ಕೊರೋನಾ ತಪ್ಪಿಸಲು ಮಾಸ್ಕ್ ಧರಿಸುವುದೂ ಕೂಡ ಮುಖ್ಯ: ಆಂಗ್ಲರ ವಿರುದ್ಧ ನೊಬೆಲ್ ವಿಜೇತ ವಿ.ರಾಮಕೃಷ್ಣನ್ ಕಿಡಿ

ವಿಶ್ವದ ಬಹುತೇಕ ಎಲ್ಲ ರಾಷ್ಟ್ರಗಳನ್ನೂ ಇನ್ನಿಲ್ಲದಂತೆ ಪೀಡಿಸುತ್ತಿರುವ ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದೂ ಕೂಡ ಮುಖ್ಯ ಎಂದು ಭಾರತ ಮೂಲದ ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿ ವೆಂಕಟರಮಣನ್ ರಾಮಕೃಷ್ಣನ್ ಅವರು ಹೇಳಿದ್ದಾರೆ.

Published: 07th July 2020 03:49 PM  |   Last Updated: 07th July 2020 05:21 PM   |  A+A-


masks-British

ಸಂಗ್ರಹ ಚಿತ್ರ

Posted By : Srinivasamurthy VN
Source : PTI

ಲಂಡನ್: ವಿಶ್ವದ ಬಹುತೇಕ ಎಲ್ಲ ರಾಷ್ಟ್ರಗಳನ್ನೂ ಇನ್ನಿಲ್ಲದಂತೆ ಪೀಡಿಸುತ್ತಿರುವ ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದೂ ಕೂಡ ಮುಖ್ಯ ಎಂದು ಭಾರತ ಮೂಲದ ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿ ವೆಂಕಟರಮಣನ್ ರಾಮಕೃಷ್ಣನ್ ಅವರು ಹೇಳಿದ್ದಾರೆ.

ಬ್ರಿಟನ್ ನ ಪ್ರಮುಖ ವಿಜ್ಞಾನಿಗಳು ಮತ್ತು ರಾಯಲ್ ಸೊಸೈಟಿಯ ಅಧ್ಯಕ್ಷರೂ ಕೂಡ ಆಗಿರುವ ವೆಂಕಟರಮಣನ್ ರಾಮಕೃಷ್ಣನ್ ಅವರು ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಬೇಕು ಎಂದು ಹೇಳಿದ್ಗಾರೆ. ಇದೇ ವೇಳೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸದ ಬ್ರಿಟೀಷ್ ಸರ್ಕಾರದ ವಿರುದ್ಧ ನೇರವಾಗಿ ಕಿಡಿಕಾರಿರುವ  ರಾಮಕೃಷ್ಣನ್ ಅವರು, 'ಕೊರೋನಾ ವೈರಸ್ ಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯಗೊಳಿಸುವಿಕೆಯಲ್ಲಿ ಬ್ರಿಟನ್ ಸರ್ಕಾರ ಹಿಂದೆ ಬೀಳುತ್ತಿದೆ ಎಂದೆನಿಸುತ್ತಿದೆ. 

ಕೊರೋನಾ ಪೀಡಿತ ಇತರೆ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ಬ್ರಿಟನ್ ನಲ್ಲಿ ಮಾರ್ಗದರ್ಶಿ ಸೂತ್ರಗಳ ಕಡ್ಜಾಯ ಪಾಲನೆಯಾಗುತ್ತಿಲ್ಲ. ಪ್ರಮುಖವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಬೇಕು. ಮಾರಕ ಕೊರೋನಾ ವೈರಸ್ ನಿಯಂತ್ರಣದಲ್ಲಿ ಈ ಕ್ರಮವೂ ಕೂಡ ಅತ್ಯಂತ ಮುಖ್ಯವಾಗಿದ್ದು, ಇದರಿಂದ ಸೋಂಕು ನಿಯಂತ್ರಣ ಸಾಧ್ಯ. ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ, ಆಗಾಗ ಕೈ ತೊಳೆಯುವಿಕೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವದನ್ನೂ ಕೂಡ ಕಡ್ಡಾಯ ಮಾಡಬೇಕು ಎಂದು  ರಾಮಕೃಷ್ಣನ್ ಹೇಳಿದರು.

ಬ್ರಿಟನ್ ಹೊರತು ಪಡಿಸಿದರೆ, ಜಗತ್ತಿನ ಇತರೆ ರಾಷ್ಚ್ರಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಇರುವುದು ಶಿಕ್ಷಾರ್ಹ ಮತ್ತು ದಂಡಾರ್ಹ ಅಪರಾಧವಾಗಿದೆ. ಇದೇ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಬ್ರಿಟನ್ ನಲ್ಲೂ ಜಾರಿಗೊಳಿಸಬೇಕು ಎಂದು ಹೇಳಿದರು.

ಲಂಡನ್ ನಲ್ಲಿ ನಡೆದ ಕೋವಿಡ್-19 ಮುಂಜಾಗ್ರತಾ ಕ್ರಮಗಳ ಕುರಿತಂತೆ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ  ರಾಮಕೃಷ್ಣನ್ ಅವರು, ಕೊರೋನಾ ವೈರಸ್ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾತನಾಡುತ್ತಿದ್ದರು. ಈ ವೇಳೆ ಇತರೆ ರಾಷ್ಚ್ರಗಳಲ್ಲಿ ಕೈಗೊಂಡ ಕ್ರಮಗಳ ಕುರಿತು ಉಲ್ಲೇಖಿಸಿದ ಅವರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಹೇಳಿದರು. 

Stay up to date on all the latest ಅಂತಾರಾಷ್ಟ್ರೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp