ಡಬ್ಲ್ಯೂಹೆಚ್ಒಗೆ ಭಾರೀ ಆಘಾತ: ಕೋವಿಡ್-19 ಬಿಕ್ಕಟ್ಟು ನಡುವಲ್ಲೇ ಸದಸ್ಯತ್ವದಿಂದ ಅಧಿಕೃತವಾಗಿ ಹಿಂದೆ ಸರಿದ ಅಮೆರಿಕಾ!

ಕೊರೋನಾ ವೈರಸ್ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಚೀನಾ ಬೆಂಬಲಕ್ಕೆ ನಿಂತಿದೆ ಎಂದು ಆರೋಪಿಸಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇದೀಗ ಅಧಿಕೃತವಾಗಿ ಡಬ್ಲ್ಯೂಹೆಚ್ಒ ಸಂಸ್ಥೆಯಿಂದ ಔಪಚಾರಿಕವಾಗಿ ಹೊರಗೆ ಬಂದಿದೆ. 
ಟ್ರಂಪ್
ಟ್ರಂಪ್

ವಾಷಿಂಗ್ಟನ್: ಕೊರೋನಾ ವೈರಸ್ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಚೀನಾ ಬೆಂಬಲಕ್ಕೆ ನಿಂತಿದೆ ಎಂದು ಆರೋಪಿಸಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇದೀಗ ಅಧಿಕೃತವಾಗಿ ಡಬ್ಲ್ಯೂಹೆಚ್ಒ ಸಂಸ್ಥೆಯಿಂದ ಔಪಚಾರಿಕವಾಗಿ ಹೊರಗೆ ಬಂದಿದೆ. 

ಈ ಕುರಿತು ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರೆಸ್ ಅವರಿಗೆ ಅಮೆರಿಕಾ ಮಾಹಿತಿ ರವಾನಿಸಿದ್ದು, ಜು.8 2021ರಿಂದ ಅಮೆರಿಕಾ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತವಾಗಿ ಹೊರಗುಳಿಯಲಿದೆ ಎಂದು ತಿಳಿಸಿದೆ ಎಂದು ತಿಳಿದುಬಂದಿದೆ. 

ಕೊರೋನಾ ವೈರಸ್ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರವಾಗಿ ನಿಂತಿದ್ದು, ಈ ವಿಚಾರದಲ್ಲಿ ಪಕ್ಷಪಾತ ಮಾಡುತ್ತಿದೆ. ಅಷ್ಟೇ ಅಲ್ಲದೆ ವಿಶ್ವವ್ಯಾಪಿ ವೈರಸ್ ಹರಡಲು ವಿಶ್ವ ಆರೋಗ್ಯ ಸಂಸ್ಥೆಯೇ ಕಾರಣ. ವೈರಸ್ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ ಎಂಬ ವಿಚಾರವನ್ನು ಮೊದಲೇ ತಿಳಿಸಿದ್ದರೆ, ವೈರಸ್ ಇಷ್ಟೊಂದು ಭೀಕರವ ಸ್ವರೂಪ ಪಡೆದುಕೊಳ್ಳುತ್ತಿರಲಿಲ್ಲ ಎಂದು ಟ್ರಂಪ್ ಹೇಳುತ್ತಲೇ ಬಂದಿದ್ದಾರೆ. 

ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರು ಗಂಭೀರ ಆರೋಪ ಮಾಡುತ್ತಲೇ ಇದ್ದರೂ ಈವರೆಗೂ ವಿಶ್ವ ಆರೋಗ್ಯ ಸಂಸ್ಥೆ ಮಾತ್ರ ಯಾವುದೇ ರೀತಿಯ ಪ್ರತಿಕ್ರಿಯೆಯನ್ನೂ ನೀಡಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com