ಡೊನಾಲ್ಡ್ ಟ್ರಂಪ್
ಡೊನಾಲ್ಡ್ ಟ್ರಂಪ್

ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾಸ್ಕ್ ಧರಿಸಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಇಷ್ಟು ದಿನ ಮಾಸ್ಕ್ ಧರಿಸುವುದಿಲ್ಲ ಎಂದು ಹಠ ಹಿಡಿಯುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊನೆಗೂ ಮಾಸ್ಕ್ ಧರಿಸಿದ್ದಾರೆ.

ವಾಷಿಂಗ್ಟನ್:ಇಷ್ಟು ದಿನ ಮಾಸ್ಕ್ ಧರಿಸುವುದಿಲ್ಲ ಎಂದು ಹಠ ಹಿಡಿಯುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊನೆಗೂ ಮಾಸ್ಕ್ ಧರಿಸಿದ್ದಾರೆ.

ನಿನ್ನೆ ಮಿಲಿಟರಿ ಆಸ್ಪತ್ರೆಯೊಂದಕ್ಕೆ ಭೇಟಿ ನೀಡಿದ ಅವರು ಆರೋಗ್ಯಾಧಿಕಾರಿಗಳ ನಿರ್ದೇಶನದ ಮೇರೆಗೆ ಸಾರ್ವಜನಿಕವಾಗಿ ಮಾಸ್ಕ್ ಧರಿಸಿರುವುದು ಕಂಡುಬಂತು. ವಾಷಿಂಗ್ಟನ್ ಉಪ ನಗರದಲ್ಲಿರುವ ವಾಲ್ಟರ್ ರೀಡ್ ನ್ಯಾಷನಲ್ ಮಿಲಿಟರಿ ಮೆಡಿಕಲ್ ಕೇಂದ್ರಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದ ಡೊನಾಲ್ಡ್ ಟ್ರಂಪ್ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಆರೋಗ್ಯ ಸೇವೆ ಕಾರ್ಯಕರ್ತರನ್ನು ಭೇಟಿ ಮಾಡಿದರು.

ಆಸ್ಪತ್ರೆಯ ವೈದ್ಯರು, ದಾದಿಯರು, ರೋಗಿಗಳನ್ನು ಮಾತನಾಡಿಸಿ ಶ್ವೇತಭವನಕ್ಕೆ ಹಿಂತಿರುಗುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಆಸ್ಪತ್ರೆಯಲ್ಲಿರುವಾಗ ಮಾಸ್ಕ್ ಧರಿಸುವುದು ಉತ್ತಮ ಎಂದು ನನಗನ್ನಿಸಿತು ಎಂದರು.

ಆಸ್ಪತ್ರೆಯಲ್ಲಿರುವಷ್ಟು ಹೊತ್ತು ಮಾಸ್ಕ್ ಧರಿಸಿದ್ದರೇ ಹೊರತು ಹೆಲಿಕಾಪ್ಟರ್ ನಿಂದ ಇಳಿದ ನಂತರ ಮಾಸ್ಕ್ ತೆಗೆದಿದ್ದರು. ಡೊನಾಲ್ಡ್ ಟ್ರಂಪ್ ಅವರು ಇದುವರೆಗೆ ಯಾವುದೇ ಸುದ್ದಿಗೋಷ್ಠಿಗಳಲ್ಲಿ, ಕೊರೋನಾ ವೈರಸ್ ಕಾರ್ಯಪಡೆ ಸಭೆ, ಕಾರ್ಯಕ್ರಮಗಳಲ್ಲಿ, ರ್ಯಾಲಿಗಳಲ್ಲಿ, ಸಾರ್ವಜನಿಕ ಸಮಾರಂಭಗಳಲ್ಲಿ ಮಾಸ್ಕ್ ಹಾಕಿಕೊಂಡಿರಲಿಲ್ಲ.

ಅಮೆರಿಕದಲ್ಲಿ ನಿಯಂತ್ರಣಕ್ಕೆ ಬಾರದ ರೀತಿಯಲ್ಲಿ ಕೊರೋನಾ ಹರಡುತ್ತಿದ್ದು ಮಾರ್ಚ್ ನಿಂದ ಇಲ್ಲಿಯವರೆಗೆ 3.2 ದಶಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿ 1 ಲಕ್ಷದ 34 ಸಾವಿರ ಮಂದಿ ಮೃತಪಟ್ಟಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com