ಅಮೆರಿಕದಲ್ಲೂ ಪರಿಸ್ಥಿತಿ ಕೈ ಮೀರುತ್ತಿದೆ, ಒಂದೇ ದಿನ 77 ಸಾವಿರ ಹೊಸ ಪ್ರಕರಣ ದಾಖಲು

ಅಮೆರಿಕದಲ್ಲಿ ಕೇವಲ ಒಂದು ದಿನದಲ್ಲಿ 77 ಸಾವಿರಕ್ಕೂ ಹೆಚ್ಚು ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಪರಿಸ್ಥಿತಿ ಕೈ ಮೀರುತ್ತಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಾಷಿಂಗ್ಟನ್: ಅಮೆರಿಕದಲ್ಲಿ ಕೇವಲ ಒಂದು ದಿನದಲ್ಲಿ 77 ಸಾವಿರಕ್ಕೂ ಹೆಚ್ಚು ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಪರಿಸ್ಥಿತಿ ಕೈ ಮೀರುತ್ತಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯವು ಶುಕ್ರವಾರ ಬಿಡುಗಡೆ ಮಾಡಿದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಒಂದೇ ದಿನದಲ್ಲಿ 77 ಸಾವಿರಕ್ಕೂ ಹೆಚ್ಚು ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ.

ಹೊಸದಾಗಿ 974 ಜನರು ಸೋಂಕಿಗೆ ಬಲಿಯಾಗಿದ್ದು, ಈವರೆಗೆ ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 1 ಲಕ್ಷದ 38,201 ಕ್ಕೆ ಏರಿಕೆಯಾಗಿದೆ.

ದೇಶದ ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶವಾಗಿರುವ ಫ್ಲೋರಿಡಾ ರಾಜ್ಯದಲ್ಲಿ ಗುರುವಾರ ದಾಖಲೆಯ 156 ಸಾವಿನ ಪ್ರಕರಣ ದಾಖಲಾಗಿದ್ದು, 14,ಸಾವಿರ ಹೊಸ ಪ್ರಕರಣಗಳು ವರದಿಯಾಗಿದೆ.

ಅಮೆರಿಕದಲ್ಲಿ ಕರೋನ ಹಾವಳಿ ವೀಪರಿತವಾಗುತ್ತಿದೆ ಸೋಂಕು ಹರಡುವುದನ್ನು ತಡೆಯಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಲು ದೇಶವು ವಿಫಲವಾದರೆ ದೈನಂದಿನ ಪ್ರಕರಣಗಳು ಶೀಘ್ರದಲ್ಲೇ ಲಕ್ಷ ದಾಟಬಹುದು ಎಂದೂ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಮೊದಲು ಒಂದೇ ದಿನ 68 ಸಾವಿರ ಪ್ರಕರಣ ವರದಿಯಾಗಿದೆ ಎಂದೂ ಹೇಳಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com