ಅಮೆರಿಕಾದಲ್ಲಿ ಅಬ್ಬರಿಸುತ್ತಿರುವ ಕೊರೋನಾ: ಒಂದೇ ದಿನ ಮಹಾಮಾರಿ ವೈರಸ್'ಗೆ 1,267 ಮಂದಿ ಬಲಿ

ಕೊರೋನಾ ವೈರಸ್'ಗೆ ವಿಶ್ವದ ದೊಡ್ಡಣ್ಣ ಅಮೆರಿಕಾ ಕಂಗಾಲಾಗಿದ್ದು, ಒಂದೇ ದಿನ ಮಹಾಮಾರಿ ವೈರಸ್ 1,267 ಮಂದಿಯನ್ನು ಬಲಿ ಪಡೆದುಕೊಂಡಿದೆ ಎಂದು ವರದಿಗಳು ತಿಳಿಸಿವೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾಷಿಂಗ್ಟನ್: ಕೊರೋನಾ ವೈರಸ್'ಗೆ ವಿಶ್ವದ ದೊಡ್ಡಣ್ಣ ಅಮೆರಿಕಾ ಕಂಗಾಲಾಗಿದ್ದು, ಒಂದೇ ದಿನ ಮಹಾಮಾರಿ ವೈರಸ್ 1,267 ಮಂದಿಯನ್ನು ಬಲಿ ಪಡೆದುಕೊಂಡಿದೆ ಎಂದು ವರದಿಗಳು ತಿಳಿಸಿವೆ. 

ಇದರೊಂದಿಗೆ ಅಮೆರಿಕಾದಲ್ಲಿ ಕೊರೊನಾ ವೈರಸ್ (ಕೋವಿಡ್ -19) ಸಾಂಕ್ರಾಮಿಕದಿಂದ ಸಾವನ್ನಪ್ಪಿದವರ ಸಂಖ್ಯೆ 1,50,034 ಕ್ಕೆ ತಲುಪಿದಂತಾಗಿದೆ. 

ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ಕೇಂದ್ರದ ಪ್ರಕಾರ, ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಬುಧವಾರ 43,96,030 ಕ್ಕೆ ತಲುಪಿದೆ ಎಂದು ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com