ಕೊರೋನಾ ವೈರಸ್: ವಿಶ್ವಾದ್ಯಂತ 1.08 ಲಕ್ಷ ರೋಗಿಗಳು ಗುಣಮುಖ, ಸೋಂಕಿತರ ಸಂಖ್ಯೆ 6.15 ಮಿಲಿಯನ್ ಗೆ ಏರಿಕೆ

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ವಿಶ್ವಾದ್ಯಂತ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಕಳೆದ 24 ಗಂಟೆಗಳ ಅವಧಿಯಲ್ಲಿ ಪ್ರಪಂಚದಾದ್ಯಂತ 1.08 ಲಕ್ಷ ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾಷಿಂಗ್ಟನ್: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ವಿಶ್ವಾದ್ಯಂತ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಕಳೆದ 24 ಗಂಟೆಗಳ ಅವಧಿಯಲ್ಲಿ ಪ್ರಪಂಚದಾದ್ಯಂತ 1.08 ಲಕ್ಷ ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

ಈ ಬಗ್ಗೆ ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಪ್ರಪಂಚದಾದ್ಯಂತ 1.08 ಲಕ್ಷ ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 28.47 ಲಕ್ಷಕ್ಕೆ ಏರಿಕೆಯಾಗಿದೆ. ಕೊರೋನಾ ಆರಂಭವಾದ ಡಿಸೆಂಬರ್  2019ರಿಂದ ಇಲ್ಲಿಯವರೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 28.47ಲಕ್ಷ ಮಂದಿ. ಕಳೆದ 24 ಗಂಟೆಗಳ ಅವಧಿಯಲ್ಲಿ ವಿಶ್ವದೆಲ್ಲೆಡೆ 108,429 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ವಿಶ್ವದಲ್ಲಿ 30.45 ಲಕ್ಷ ಮಂದಿ ವಿವಿಧ ಆಸ್ಪತ್ರೆ ಹಾಗೂ ತಾತ್ಕಾಲಿಕ ಆರೋಗ್ಯ  ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಪ್ರಪಂಚದಾದ್ಯಂತ 62.66 ಲಕ್ಷ ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿವೆ. 

ಸಾವಿನ ಸಂಖ್ಯೆ 3.71ಲಕ್ಷ
ಇನ್ನು ಕೊರೋನಾ ಸೋಂಕಿನಿಂದ ಪ್ರಪಂಚದ ಒಟ್ಟು ಸಾವಿನ ಸಂಖ್ಯೆ ಸೋಮವಾರದ ವೇಳೆಗೆ 3.73 ಲಕ್ಷ ತಲುಪಿದೆ. ಮಾರಕ ಕೊರೋನಾ ವೈರಸ್ ಗೆ ಈ ವರೆಗೂ 373,960ಕ್ಕೆ ಏರಿಕೆಯಾಗಿದೆ. ಪ್ರಮುಖವಾಗಿ ಅಮೆರಿಕಾವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಕೊರೊನಾಗೆ ಇಲ್ಲಿಯವರೆಗೆ  1.06 ಲಕ್ಷ ಮಂದಿ ಬಲಿಯಾಗಿದ್ದಾರೆ. ಆದರೂ ಅಮೆರಿಕಾ ವೈದ್ಯರ ಸತತ ಪ್ರಯತ್ನದಿಂದಾಗಿ 5.99 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಅಮೆರಿಕಾದಲ್ಲಿ ಒಟ್ಟು 18.37 ಲಕ್ಷ ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿವೆ. 11.31 ಲಕ್ಷ ಮಂದಿ ಆಸ್ಪತ್ರೆಗಳಿಗೆ ದಾಖಲಾಗಿದ್ದು, ಚಿಕಿತ್ಸೆ  ಪಡೆಯುತ್ತಿದ್ದಾರೆ. 17 ಸಾವಿರ ಮಂದಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com