ಕೊರೋನಾ ವೈರಸ್: ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 18 ಲಕ್ಷಕ್ಕೆ ಏರಿಕೆ, 1.5 ಲಕ್ಷ ಮಂದಿ ಸಾವು

ಮಾರಕ ಕೊರೋನಾ ವೈರಸ್ ಗೆ ತತ್ತರಿಸಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 18 ಲಕ್ಷ ಗಡಿ ದಾಟಿದ್ದು, ಈ ವರೆಗೂ 1.5 ಲಕ್ಷ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನ್ಯೂಯಾರ್ಕ್‌: ಮಾರಕ ಕೊರೋನಾ ವೈರಸ್ ಗೆ ತತ್ತರಿಸಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 18 ಲಕ್ಷ ಗಡಿ ದಾಟಿದ್ದು, ಈ ವರೆಗೂ 1.5 ಲಕ್ಷ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೊನಾವೈರಸ್‌ ಸೋಂಕಿತರ ಸಂಖ್ಯೆ ಅಮೆರಿಕದಲ್ಲಿ 18 ಲಕ್ಷ ದಾಟಿದ್ದು, ಇದುವರೆಗೆ ಒಟ್ಟು 18,11,370 ಜನರಿಗೆ ಸೋಂಕು ತಗುಲಿದೆ ಎಂದು ಜಾನ್‌ ಹಾಪ್‌ಕಿನ್ಸ್‌ ವಿವಿಯ ಕೊರೊನಾ ಸಂಶೋದನಾ ಕೇಂದ್ರ ಮಾಹಿತಿ ನೀಡಿದೆ. ಅಂತೆಯೇ ಸೋಂಕಿಗೆ ತುತ್ತಾಗಿದ್ದ  1,05,165 ಜನರು ಮೃತಪಟ್ಟಿದ್ದಾರೆ. ನ್ಯೂಯಾರ್ಕ್ ಒಂದರಲ್ಲೇ ಒಟ್ಟು 3,71,711 ಪ್ರಕರಣಗಳು ವರದಿಯಾಗಿದ್ದು, 29,833 ಮಂದಿ ಮೃತಪಟ್ಟಿದ್ದಾರೆ. 

ಅಮೆರಿಕದ ನಂತರ ಅತಿಹೆಚ್ಚು ಪ್ರಕರಣಗಳು ವರದಿಯಾಗಿರುವ ಬ್ರೆಜಿಲ್‌ನಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷ ದಾಟಿದ್ದು, 29,937 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನು ರಷ್ಯಾದಲ್ಲಿ ಸೋಂಕಿತರ ಸಂಖ್ಯೆ 4 ಲಕ್ಷ ಮೀರಿದ್ದು, 4,849 ಜನರು ಮೃತಪಟ್ಟಿದ್ದಾರೆ.

ಇಂಗ್ಲೆಂಡ್‌ನಲ್ಲಿ 2,77,736 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 39,127 ಸೋಂಕಿತರು ಸಾವಿಗೀಡಾಗಿದ್ದಾರೆ. ಗತ್ತಿನಾದ್ಯಂತ ಇದುವರೆಗೆ ಒಟ್ಟು 62,66,192 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸಾವಿನ ಸಂಖ್ಯೆ 3.75 ಲಕ್ಷಕ್ಕೆ ಏರಿಕೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com