ವಿಶ್ವದಾದ್ಯಂತ ಕೊರೋನಾ ರಣಕೇಕೆ: 72 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 4 ಲಕ್ಷ ಮಂದಿ ಬಲಿ

ವಿಶ್ವದಾದ್ಯಂತ ಕೊರೋನಾ ರಣಕೇಕೆ ಹಾಕುತ್ತಿದ್ದು, ಬರೋಬ್ಬರಿ 72 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ, ಅಲ್ಲದೆ, ಮಹಾಮಾರಿ ವೈರಸ್'ಗೆ 4 ಲಕ್ಷಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಿನೆವಾ: ವಿಶ್ವದಾದ್ಯಂತ ಕೊರೋನಾ ರಣಕೇಕೆ ಹಾಕುತ್ತಿದ್ದು, ಬರೋಬ್ಬರಿ 72 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ, ಅಲ್ಲದೆ, ಮಹಾಮಾರಿ ವೈರಸ್'ಗೆ 4 ಲಕ್ಷಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 

ಗುರುವಾರ ಒಂದೇ ದಿನ ವಿವಿಧ ರಾಷ್ಟ್ರಗಳಲ್ಲಿ 128,419 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದ್ದು, 5,947 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ವಿಶ್ವದಾದ್ಯಂತ ಒಟ್ಟಾರೆ ಸೋಂಕಿತರ ಸಂಖ್ಯೆ 7,273,958ಕ್ಕೆ ತಲುಪಿದೆ. ಅಲ್ಲದೆ, ಸಾವಿನ ಸಂಖ್ಯೆ ಕೂಡ 413,000ಕ್ಕೆ ಏರಿಕೆಯಾಗಿದೆ. 

ಇನ್ನು ಅಮೆರಿಕಾದಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ದಿನದಿಂದ ದಿನಕ್ಕೆ ಆ ರಾಷ್ಟ್ರದಲ್ಲಿ ಸೋಂಕಿತರು ಹಾಗೂ ಬಲಿಯಾಗುತ್ತಿರುವವರ ಸಂಖ್ಯೆ ಏರಿತ್ತಲೇ ಇದೆ. ಅಮೆರಿಕಾದಲ್ಲಿ 2,089,701 ಮಂದಿ ಸೋಂಕಿನಿಂದ ಬಳಲುತ್ತಿದ್ದು, 116,034 ಸಾವನ್ನಪ್ಪಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com