ವಿಶ್ವದಾದ್ಯಂತ ಕೊರೋನಾ ರಣಕೇಕೆ: 80 ಲಕ್ಷ ಗಡಿಯತ್ತ ಸೋಂಕಿತರ ಸಂಖ್ಯೆ, 4.34 ಲಕ್ಷ ಮಂದಿ ಸಾವು

ವಿಶ್ವದಾದ್ಯಂತ ಕೊರೋನಾ ರಣಕೇಕೆ ಹಾಕುತ್ತಿದ್ದು, ಸೋಂಕಿತರ ಸಂಖ್ಯೆ ಇದೀಗ 80 ಲಕ್ಷಯತ್ತ ಸಾಗುತ್ತಿದೆ. ಅಲ್ಲದೆ, 4.34 ಲಕ್ಷ ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಿನಿವಾ: ವಿಶ್ವದಾದ್ಯಂತ ಕೊರೋನಾ ರಣಕೇಕೆ ಹಾಕುತ್ತಿದ್ದು, ಸೋಂಕಿತರ ಸಂಖ್ಯೆ ಇದೀಗ 80 ಲಕ್ಷಯತ್ತ ಸಾಗುತ್ತಿದೆ. ಅಲ್ಲದೆ, 4.34 ಲಕ್ಷ ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ. 

ಕಳೆದ 24 ಗಂಟೆಗಳಲ್ಲಿ ವಿವಿಧ ರಾಷ್ಟ್ರಗಳಲ್ಲಿ ಬರೋಬ್ಬರಿ 118,502 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 3,255 ಮಂದಿ ಬಲಿಯಾಗಿದ್ದಾರೆ. 

ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 7,941,791 ಹಾಗೂ ಬಲಿಯಾದವರ ಸಂಖ್ಯೆ 434,796ಕ್ಕೆ ಏರಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ. 

ಇನ್ನು ಅಮೆರಿಕಾ ಒಂದರಲ್ಲಿಯೇ ಬರೋಬ್ಬರಿ 3.8 ಮಿಲಿಯನ್ ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಬಲಿಯಾದವರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರುತ್ತಲೇ ಇದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com