ಭಾರತ-ಚೀನಾ ಗಡಿ ಸಂಘರ್ಷವನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ: ಅಮೆರಿಕ

ಭಾರತ ಮತ್ತು ಚೀನಾ ಸೇನಾಪಡೆಗಳಿಂದ ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಘರ್ಷಣೆ ನಡೆದು ಎರಡೂ ದೇಶಗಳ ಸೈನಿಕರು ಹುತಾತ್ಮರಾಗಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಪ್ರತಿಕ್ರಿಯಿಸಿದ ಅಮೆರಿಕ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ ಎಂದು ಹೇಳಿದೆ.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ವಾಷಿಂಗ್ಟನ್: ಭಾರತ ಮತ್ತು ಚೀನಾ ಸೇನಾಪಡೆಗಳಿಂದ ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಘರ್ಷಣೆ ನಡೆದು ಎರಡೂ ದೇಶಗಳ ಸೈನಿಕರು ಹುತಾತ್ಮರಾಗಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಪ್ರತಿಕ್ರಿಯಿಸಿದ ಅಮೆರಿಕ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ ಎಂದು ಹೇಳಿದೆ.

ಭಾರತ ಮತ್ತು ಚೀನಾ ಸೇನೆಗಳಿಂದ ಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆ ಬಳಿ ಏನಾಗುತ್ತಿದೆ ಎಂದು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ. 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತ ಪ್ರಕಟಿಸಿದೆ, ಹುತಾತ್ಮ ಯೋಧರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ. ಸದ್ಯದ ಪರಿಸ್ಥಿತಿಯನ್ನು ಶಾಂತಿಯುತವಾಗಿ ಮಾತುಕತೆ ಮೂಲಕ ಎರಡೂ ದೇಶಗಳು ಬಗೆಹರಿಸಿಕೊಳ್ಳಬೇಕೆಂದು ಬಯಸುತ್ತೇವೆ ಎಂದು ಅಮೆರಿಕ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ಕಳೆದ ಜೂನ್ 2ರಂದು ಫೋನ್ ಸಂಭಾಷಣೆಯಲ್ಲಿ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ-ಚೀನಾ ಗಡಿಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದರು.

ಈ ಮಧ್ಯೆ ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್, ಭಾರತ-ಚೀನಾ ಗಡಿಭಾಗದಲ್ಲಿ ಆಗುತ್ತಿರುವ ಸಾವು-ನೋವಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಸಾಧ್ಯವಾದಷ್ಟು ಹಿಂಸಾಚಾರವನ್ನು ನಿಲ್ಲಿಸಿ ಶಾಂತಿಯುತ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಹೇಳಿದ್ದಾರೆ ಎಂದು ಅವರ ವಕ್ತಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com