ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟು ಆತಂಕಕಾರಿ, ತೀಕ್ಷ್ಣವಾಗಿ ಗಮನಿಸುತ್ತಿದ್ದೇವೆ: ಬ್ರಿಟನ್ ಪ್ರಧಾನಿ

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟು ಅತ್ಯಂತ ಗಂಭೀರ ಮತ್ತು ಆಂತಕಕಾರಿ ಪರಿಸ್ಥಿತಿ. ಅಲ್ಲಿನ ಬೆಳವಣಿಗಳನ್ನು ಗಮನಿಸುತ್ತಿರುವುದಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ. 
ಬೋರಿಸ್ ಜಾನ್ಸನ್
ಬೋರಿಸ್ ಜಾನ್ಸನ್

ಲಂಡನ್: ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟು ಅತ್ಯಂತ ಗಂಭೀರ ಮತ್ತು ಆಂತಕಕಾರಿ ಪರಿಸ್ಥಿತಿ. ಅಲ್ಲಿನ ಬೆಳವಣಿಗಳನ್ನು ಗಮನಿಸುತ್ತಿರುವುದಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ. 

ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಒಂದು ಕಡೆ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿರುವ ಕಾಮನ್ ವೆಲ್ತ್ ಸದಸ್ಯ ರಾಷ್ಟ್ರ. ಮತ್ತೊಂದೆಡೆ ನಮ್ಮ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಪ್ರಶ್ನೆ ಮಾಡುವ ದೇಶ. ಹೀಗಾಗಿ ಉಭಯ ದೇಶಗಳು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. 

ಹೌಸ್ ಆಫ್ ಕಾಮನ್ಸ್ ನಲ್ಲಿ ಕನ್ಸರ್ವೇಟಿವ್ ಪಕ್ಷದ ಸಂಸದ ಫ್ಲಿಕ್ ಡ್ರಮ್ಮೊಂಡ್ ಅವರು ಭಾರತ-ಚೀನಾ ನಡುವಿನ ಗಡಿ ವಿವಾದದ ಪರಿಣಾಮ ನಮ್ಮ ದೇಶದ ಮೇಲೆ ಪ್ರಭಾವ ಬೀರುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಪ್ರಧಾನಿ ಬೋರಸ್ ಜಾನ್ಸನ್ ಈ ಹೇಳಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com