ವಿಶ್ವದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 9.90 ದಶಲಕ್ಷಕ್ಕೆ ಏರಿಕೆ, 4.80 ಲಕ್ಷ ಮಂದಿ ಸಾವು

ವಿಶ್ವದೆಲ್ಲೆಡೆ ಕೊರೋನಾ ಸ್ಫೋಟಗೊಂಡಿದ್ದು, 9.90 ದಶಲಕ್ಷ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್'ಗೆ 4.80 ಲಕ್ಷ ಮಂದಿ ಬಲಿಯಾಗಿದ್ದಾರೆಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಿನೆವಾ: ವಿಶ್ವದೆಲ್ಲೆಡೆ ಕೊರೋನಾ ಸ್ಫೋಟಗೊಂಡಿದ್ದು, 9.90 ದಶಲಕ್ಷ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್'ಗೆ 4.80 ಲಕ್ಷ ಮಂದಿ ಬಲಿಯಾಗಿದ್ದಾರೆಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ. 

ಕಳೆದ 24 ಗಂಟೆಗಳಲ್ಲಿ ವಿವಿಧ ರಾಷ್ಟ್ರಗಳಲ್ಲಿ 1,77,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 5,116 ಮಂದಿ ಬಲಿಯಾಗಿದ್ದಾರೆ. 

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,904,963ಕ್ಕೆ ಏರಿಕೆಯಾಗಿದ್ದು, 496,866 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 9.90 ದಶಲಕ್ಷ ಮಂದಿ ಸೋಂಕಿತರ ಪೈಕಿ ಈ ವರೆಗೂ 5,357,840 ಸೋಂಕಿನಿಂದ ಗುಣಮುಖರಾಗಿದ್ದಾರೆ. 

ಈ ನಡುವೆ ಅಮೆರಿಕಾ ಒಂದು ರಾಷ್ಟ್ರದಲ್ಲಿಯೇ 4.7 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಇನ್ನು ಯುರೋಪ್ ನ ಲ್ಲಿ 2.6 ಲಕ್ಷ ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com