ವಾಲ್ಮಾರ್ಟ್ ವಿತರಣಾ ಕೇಂದ್ರದಲ್ಲಿ ಗುಂಡಿನ ದಾಳಿ: ಇಬ್ಬರ ಸಾವು, 4 ಮಂದಿ ಗಾಯ

ಕ್ಯಾಲಿಫೋರ್ನಿಯಾದ ರೆಡ್ ಬ್ಲಫ್‌ನಲ್ಲಿರುವ ವಾಲ್‌ಮಾರ್ಟ್ ವಿತರಣಾ ಕೇಂದ್ರದಲ್ಲಿ ಭಾನುವಾರ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಇತರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾಷಿಂಗ್ಟನ್: ಕ್ಯಾಲಿಫೋರ್ನಿಯಾದ ರೆಡ್ ಬ್ಲಫ್‌ನಲ್ಲಿರುವ ವಾಲ್‌ಮಾರ್ಟ್ ವಿತರಣಾ ಕೇಂದ್ರದಲ್ಲಿ ಭಾನುವಾರ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಇತರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಇಬ್ಬರು ಗುಂಡೇಟಿನಿಂದ ಮೃತಪಟ್ಟಿದ್ದರೆ, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಎಲಿಜಬೆತ್ ಸಮುದಾಯ ಆಸ್ಪತ್ರೆಯ ವಕ್ತಾರ ಆಲಿಸನ್ ಹೆಂಡ್ರಿಕ್ಸನ್ ನ್ಯೂಯಾರ್ಕ್ ಟೈಮ್ಸ್ ಗೆ ತಿಳಿಸಿದ್ದಾರೆ.

ರೆಡ್ ಬ್ಲಫ್ ಡೈಲಿ ನ್ಯೂಸ್ ಪ್ರಕಾರ, ಶಿಫ್ಟ್ ಬದಲಾವಣೆಯ ಸಮಯದಲ್ಲಿ ಶೂಟಿಂಗ್ ಸಂಭವಿಸಿದೆ. ಬಂದೂಕುಧಾರಿ ವಿತರಣಾ ಕೇಂದ್ರಕ್ಕೆ ನುಗ್ಗಿ ಹತ್ತಿರದಿಂದಲೇ ಗುಂಡು ಹಾರಿಸಿದ್ದಾನೆ ಎಂದೂ ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com