ಕೋವಿಡ್-19: 5 ಲಕ್ಷ ಗಡಿ ದಾಟಿದ ಕೊರೋನಾ ವೈರಸ್ ಸೋಂಕಿತರ ಜಾಗತಿಕ ಸಾವಿನ ಸಂಖ್ಯೆ

ವಿಶ್ವದ 213ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ ಇದೀಗ 5 ಲಕ್ಷ ಗಡಿ ದಾಟಿದೆ.
ಕೊರೋನಾ
ಕೊರೋನಾ

ವಾಷಿಂಗ್ಟನ್: ವಿಶ್ವದ 213ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ ಇದೀಗ 5 ಲಕ್ಷ ಗಡಿ ದಾಟಿದೆ.

ಹೌದು.. ಜಗತ್ತಿನಾದ್ಯಂತ ದಿನದಿಂದ ದಿನಕ್ಕೆ ಕೋವಿಡ್–19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇದುವರೆಗೆ ಮಹಾಮಾರಿಗೆ ಬಲಿಯಾದವರ ಸಂಖ್ಯೆ 5 ಲಕ್ಷ ಗಡಿ ದಾಟಿದೆ. ನಿನ್ನೆ ಒಂದೇ ದಿನ ಜಗತ್ತಿನಾದ್ಯಂತ 1.80 ಲಕ್ಷ ಮಂದಿ ಹೊಸ ಸೋಂಕು ಪ್ರಕರಣ ದಾಖಲಾಗಿದ್ದು, ಆ ಮೂಲಕ ಜಾಗತಿಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 10,063,319ಕ್ಕೆ ಏರಿಕೆಯಾಗಿದೆ. ಅಮೆರಿಕದ ಜಾನ್ ಹಾಪ್ ಕಿನ್ಸ್ ವಿಶ್ವವಿದ್ಯಾಲಯದ ಕೊರೊನಾ ಸಂಶೋಧನಾ ಕೇಂದ್ರ ವರದಿ ಮಾಡಿರುವಂತೆ ಈ ವರೆಗೂ ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 10.1 ಮಿಲಿಯನ್ ಗೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಒಟ್ಟಾರೆ ಸೋಂಕಿತರಲ್ಲಿ 500,108 ಮಂದಿ ಮೃತಪಟ್ಟಿದ್ದು, ಇದುವರೆಗೆ ಒಟ್ಟು 5.12 ಲಕ್ಷ ಸೋಂಕು ಪೀಡಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಅತೀಹೆಚ್ಚು (2,637,077 ) ಜನರಲ್ಲಿ ಸೋಂಕು ಕಾಣಿಸಿಕೊಂಡಿರುವ ಅಮೆರಿಕದಲ್ಲಿ ಈವರೆಗೆ ಒಟ್ಟು 128,437 ಮಂದಿ ಮೃತಪಟ್ಟಿದ್ದಾರೆ. 1,093,456 ಮಂದಿ ಗುಣಮುಖರಾಗಿದ್ದಾರೆ. ಬ್ರೆಜಿಲ್‌ನಲ್ಲಿ  1,345,254ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಈ ಪೈಕಿ 57,658   ಸೋಂಕಿತರು ಮೃತಪಟ್ಟು, 733,848 ಮಂದಿ ಗುಣಮುಖರಾಗಿದ್ದಾರೆ.

ರಷ್ಯಾದಲ್ಲಿ ಸೋಂಕಿತರ ಸಂಖ್ಯೆ634,437ಕ್ಕೆ ಏರಿದ್ದು, ಸಾವಿನ ಸಂಖ್ಯೆ 9,073 ಆಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com