ವಿಶ್ವದೆಲ್ಲೆಡೆ ಕೊರೋನಾ ಆರ್ಭಟ: 10.41 ಕೋಟಿ ಮಂದಿಯಲ್ಲಿ ಸೋಂಕು ಪತ್ತೆ, 5.08 ಲಕ್ಷ ಮಂದಿ ಸಾವು!

ವಿಶ್ವದಾದ್ಯಂತ ಕೊರೋನಾ ಆರ್ಭಟ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 10,412,343ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂತ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಿನಿವಾ: ವಿಶ್ವದಾದ್ಯಂತ ಕೊರೋನಾ ಆರ್ಭಟ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 10,412,343ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂತ ತಿಳಿದುಬಂದಿದೆ. 

ಇನ್ನು ಮಹಾಮಾರಿ ವೈರಸ್ ವಿವಿಧ ರಾಷ್ಟ್ರಗಳು ಸೇರಿದಂತೆ ಒಟ್ಟು 508,228 ಲಕ್ಷ ಮಂದಿಯನ್ನು ಬಲಿಪಡೆದುಕೊಂಡಿದ್ದು, ವೈರಸ್ ಮಟ್ಟ ಹಾಕಲು ಇಡೀ ವಿಶ್ವವೇ ಕಂಗಾಲಾಗುವಂತೆ ಮಾಡಿದೆ. 

ಇನ್ನು 10,412,343 ಮಂದಿ ಸೋಂಕಿತರ ಪೈಕಿ ಈ ವರೆಗೂ 5,667,665 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 4,236,450 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

ಅಮೆರಿಕಾ ಒಂದು ರಾಷ್ಟ್ರದಲ್ಲಿಯೇ 2,681,811 ಮಂದಿ ಸೋಂಕಿನಿಂದ ಬಳಲುತ್ತಿದ್ದು, 128,783 ಮಂದಿ ಸಾವನ್ನಪ್ಪಿದ್ದಾರೆ. ಬ್ರೆಜಿಲ್ ನಲ್ಲಿ ಸೋಂಕಿತರ ಸಂಖ್ಯೆ 1,370,488ಕ್ಕೆ ತಲುಪಿದ್ದು, 58,385 ಮಂದಿ ಬಲಿಯಾಗಿದ್ದಾರೆ. ಇನ್ನು ರಷ್ಯಾದಲ್ಲಿ 641,156 ಮಂದಿ ಸೋಂಕಿಗೊಳಗಾಗಿದ್ದಾರೆ. 9,166 ಮಂದಿ ಸಾವನ್ನಪ್ಪಿದ್ದಾರೆ. ನಾಲ್ಕನೇ ಸ್ಥಾನದಲ್ಲಿರುವ ಭಾರತದಲ್ಲಿ ಸೋಂಕಿತರ ಸಂಖ್ಯೆ 567,536ಕ್ಕೆ ತಲುಪಿದ್ದು, 16,904ಮಂದಿ ಬಲಿಯಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com