ಕೊರೊನಾ ವೈರಾಣು: ವಿಶ್ವಬ್ಯಾಂಕ್ ನಿಂದ 12 ಶತಕೋಟಿ ಡಾಲರ್ ನೆರವು

ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕು ಜಗತ್ತಿನಾದ್ಯಂತ ವ್ಯಾಪಿಸಿರುವ ಹಿನ್ನೆಲೆಯಲ್ಲಿ ಅನೇಕ ದೇಶಗಳಿಗೆ ನೆರವಾಗಲು ವಿಶ್ವಬ್ಯಾಂಕ್ 12 ಶತಕೋಟಿ ಡಾಲರ್ ವರೆಗೆ ನೆರವು ನೀಡುವುದಾಗಿ ಘೋಷಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾಷಿಂಗ್ಟನ್: ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕು ಜಗತ್ತಿನಾದ್ಯಂತ ವ್ಯಾಪಿಸಿರುವ ಹಿನ್ನೆಲೆಯಲ್ಲಿ ಅನೇಕ ದೇಶಗಳಿಗೆ ನೆರವಾಗಲು ವಿಶ್ವಬ್ಯಾಂಕ್ 12 ಶತಕೋಟಿ ಡಾಲರ್ ವರೆಗೆ ನೆರವು ನೀಡುವುದಾಗಿ ಘೋಷಿಸಿದೆ.

ಕೊರೊನಾ ಸೋಂಕು 60 ಕ್ಕೂ ಹೆಚ್ಚು ದೇಶಗಳಲ್ಲಿ ಕಾಣಿಸಿಕೊಂಡಿದ್ದು ಆಯಾ ದೇಶಗಳು ಸೋಂಕಿನ ವಿರುದ್ಧ ಆರೋಗ್ಯ ರಕ್ಷಣೆ ನೀಡಲು ಆರಂಭಿಕ ನೆರವಾಗಿ 12 ಶತಕೋಟಿ ಡಾಲರ್ ನೆರವು ನೀಡುವುದಾಗಿ ವಿಶ್ವ ಬ್ಯಾಂಕ್ ಹೇಳಿಕೆ ತಿಳಿಸಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್, ಕೊರೋನಾ ಭೀತಿಯನ್ನು ಎದುರಿಸುತ್ತಿರುವ ರಾಷ್ಟ್ರಗಳಿಗೆ ಅಗತ್ಯತೆಗಳಿಗೆ ಸ್ಪಂದಿಸುವ ಸಲುವಾಗಿ ತ್ವರಿತ ಮತ್ತು ಪರಿಣಾಮಕಾರಿ ಕ್ರಮಗಳನ್ನು ಒದಗಿಸಲಾಗುತ್ತಿದೆ. ಇದು ನಮ್ಮ ಗುರಿಯಾಗಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com