ವಿಶ್ವಾದ್ಯಂತ ಕೊರೋನಾ ವೈರಸ್ ಗೆ 3300 ಮಂದಿ ಬಲಿ: ವಿಶ್ವ ಆರೋಗ್ಯ ಸಂಸ್ಥೆ

ಮಾರಣಾಂತಿಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 3300ಕ್ಕೆ ಏರಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಿನೀವಾ: ಮಾರಣಾಂತಿಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 3300ಕ್ಕೆ ಏರಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಚೀನಾದಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಗೆ ವಿಶ್ವಾದ್ಯಂತ ಸುಮಾರು 3300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಅಂತೆಯೇ ಗುರುವಾರದ ವೇಳೆಗೆ 2,241 ಹೊಸ ದೃಢಪಟ್ಟ ಪ್ರಕರಣಗಳು ದಾಖಲಾಗಿದ್ದು, ಒಟ್ಟು 95,333 ಜನರಿಗೆ ಸೋಂಕು ತಲುಗಿದೆ ಎಂದು ಡಬ್ಲ್ಯುಎಚ್‌ಒದ ಇತ್ತೀಚಿನ ಅಧಿಕೃತ ಅಂಕಿಅಂಶಗಳು ತಿಳಿಸಿವೆ.

ಚೀನಾದಲ್ಲಿ 3,042 ಮಂದಿಗೆ ಹೊಸದಾಗಿ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಆ ಮೂಲಕ ಚೀನಾವೊಂದರಲ್ಲೇ ಸೋಂಕಿತರ ಸಂಖ್ಯೆ 80,565ಕ್ಕೇರಿದ್ದು, ವಿಶ್ವಾದ್ಯಂತ ಸೋಂಕಿತರ ಸಂಖ್ಯೆ 95,333 ಸಾವಿರಕ್ಕೇರಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com