ಕಠಿಣ ಕ್ರಮ ಕೈಗೊಂಡಲ್ಲಿ ಕೊರೋನಾ ವೈರಸ್ ಜೂನ್ ಒಳಗೆ ಅಂತ್ಯ; ಚೀನಾ

ವಿಶ್ವಾದ್ಯಂತ ತೀವ್ರವಾಗಿ ಹರಡುತ್ತಿರುವ ಕೊರೋನಾ ವೈರಸ್ ತಡೆಯಲು ಎಲ್ಲಾ ದೇಶಗಳು  ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಲ್ಲಿ ಜೂನ್ ಅಂತ್ಯದೊಳಗೆ ರದನ್ನು ಸಂಪೂರ್ಣವಾಗಿ ತಡೆಯಬಹುದು ಎಂದು ಚೀನಾದ ತಜ್ಞರ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. 
ಕಠಿಣ ಕ್ರಮ ಕೈಗೊಂಡಲ್ಲಿ ಕೊರೋನಾ ವೈರಸ್ ಜೂನ್ ಒಳಗೆ ಅಂತ್ಯ; ಚೀನಾ
ಕಠಿಣ ಕ್ರಮ ಕೈಗೊಂಡಲ್ಲಿ ಕೊರೋನಾ ವೈರಸ್ ಜೂನ್ ಒಳಗೆ ಅಂತ್ಯ; ಚೀನಾ

ಬೀಜಿಂಗ್: ವಿಶ್ವಾದ್ಯಂತ ತೀವ್ರವಾಗಿ ಹರಡುತ್ತಿರುವ ಕೊರೋನಾ ವೈರಸ್ ತಡೆಯಲು ಎಲ್ಲಾ ದೇಶಗಳು ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಲ್ಲಿ ಜೂನ್ ಅಂತ್ಯದೊಳಗೆ ರದನ್ನು ಸಂಪೂರ್ಣವಾಗಿ ತಡೆಯಬಹುದು ಎಂದು ಚೀನಾದ ತಜ್ಞರ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. 

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ತಜ್ಞ ವೈದ್ಯರಾದ ಜಾಂಗ್, ಅತಿ ಹೆಚ್ಚು ಸೋಂಕಿತ ಪ್ರಕರಣಗಳನ್ನು ಹೊಂದಿರುವ ಇಟಲಿ ಹಾಗೂ ದಕ್ಷಿಣ ಕೊರಿಯಾದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಅಲ್ಲಿನ ಪ್ರಕರಣಗಳು ಇಳಿಕೆಯಾಗಿವೆ. ಇದು ಹೀಗೆ ಮುಂದುವರಿದಲ್ಲಿ ಜೂನ್ ಅಂತ್ಯದೊಳಗೆ ಈ ಸಾಂಕ್ರಾಮಿಕ ಕಾಯಿಲೆ ಅಂತ್ಯಗೊಳ್ಳಲಿದೆ ಎಂದಿದ್ದಾರೆ. 

ಅತಿಯಾದ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಸಕ್ರಿಯವಾಗಿರುವುದಿಲ್ಲ. ಆದ್ದರಿಂದ ಇನ್ನು ಮುಂದೆ ಅದು ಕಡಿಮೆಯಾಗಲಿದೆ ಎಂದಿದ್ದಾರೆ. ಇಟಲಿ, ಸ್ಪೈನ್, ಅಮೆರಿಕ ಹಾಗೂ ಫ್ರಾನ್ಸ್ ನಲ್ಲಿ ಸೋಂಕಿನ ಹರಡುವಿಕೆಯ ಆತಂಕ ಹೆಚ್ಚಿದೆ. ಆದ್ದರಿಂದ ಅದರ ಬಗ್ಗೆ ಸರ್ಕಾರಗಳು ತೀವ್ರ ನಿಗಾ ವಹಿಸಬೇಕಿದೆ. ಚೀನಾದಲ್ಲಿ ಹುಬೇ ಮತ್ತು ವುಹಾನ್ ಹೊರತುಪಡಿಸಿ ಉಳಿದೆಡೆ ಸೋಂಕಿತರ ಸಾವಿನ ಸಂಖ್ಯೆ ಕಡಿಮೆಯಿದೆ. ಇದರರ್ಥ ದೇಶದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದರ್ಥ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com