ಕೊರೋನಾ ವೈರಸ್ ಭೀತಿ ನಡುವೆಯೇ ಆಫ್ಘನ್ ನಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ; ಆತ್ಮಹತ್ಯಾ ದಾಳಿಯಲ್ಲಿ 11 ಸಾವು

ಇಡೀ ವಿಶ್ವವೇ ಕೊರೋನಾ ವೈರಸ್ ನಿಂದಾಗಿ ತತ್ತರಿಸಿಹೋಗುತ್ತಿರುವ ಸಮಯದಲ್ಲೇ ಅತ್ತ ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆದು ಕನಿಷ್ಠ 11 ಮಂದಿಯ ಸಾವಿಗೆ ಕಾರಣರಾಗಿದ್ದಾರೆ.
ಕಾಬುಲ್ ಗುರುದ್ವಾರದ ಮೇಲೆ ಉಗ್ರರ ದಾಳಿ ಮತ್ತು ಭದ್ರತಾ ಪಡೆಗಳ ಕಾರ್ಯಾಚರಣೆ
ಕಾಬುಲ್ ಗುರುದ್ವಾರದ ಮೇಲೆ ಉಗ್ರರ ದಾಳಿ ಮತ್ತು ಭದ್ರತಾ ಪಡೆಗಳ ಕಾರ್ಯಾಚರಣೆ

ಕಾಬುಲ್: ಇಡೀ ವಿಶ್ವವೇ ಕೊರೋನಾ ವೈರಸ್ ನಿಂದಾಗಿ ತತ್ತರಿಸಿಹೋಗುತ್ತಿರುವ ಸಮಯದಲ್ಲೇ ಅತ್ತ ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆದು ಕನಿಷ್ಠ 11 ಮಂದಿಯ ಸಾವಿಗೆ ಕಾರಣರಾಗಿದ್ದಾರೆ.

ಆಫ್ಘಾನಿಸ್ತಾನ ರಾಜಧಾನಿ ಕಾಬುಲ್ ನಲ್ಲಿ ಸಿಖ್ಖರ ಪವಿತ್ರ ಸ್ಥಳ ಗುರುದ್ವಾರದಲ್ಲಿ ಆತ್ಮಹತ್ಯಾ ದಾಳಿ ನಡೆಸಿದ್ದು, ಈ ವೇಳೆ ಸಾಮೂಹಿಕ ಪ್ರಾರ್ಥನೆಯಲ್ಲಿದ್ದ ಕನಿಷ್ಠ 11 ಮಂದಿ ಸಿಖ್ ಧರ್ಮೀಯರು ಸಾವನ್ನಪ್ಪಿದ್ದಾರೆ. ಕಾಬುಲ್ ನ ಶೋರ್ ಬಜಾರ್ ಪ್ರಾಂತ್ಯದಲ್ಲಿರುವ ಧರ್ಮಶಾಲಾ  ಗುರುದ್ವಾರದ ಮೇಲೆ ಶಸ್ತ್ರಸಜ್ಜಿತ ಉಗ್ರರು ಇಂದು ಬೆಳಗ್ಗೆ 7.45ರಲ್ಲಿ ದಾಳಿ ಮಾಡಿದ್ದು, ಈ ವೇಳೆ ಓರ್ವ ಉಗ್ರ ತಾನು ಕಟ್ಟಿಕೊಂಡಿದ್ದ ಬಾಂಬ್ ಅನ್ನು ಸ್ಫೋಟಿಸಿಕೊಂಡಿದ್ದಾನೆ. ಈ ವೇಳೆ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಷಯ  ತಿಳಿಯುತ್ತಿದ್ದಂತೆಯೇ ಭದ್ರತಾ ಪಡೆಗಳು ದೌಡಾಯಿಸಿದ್ದು, ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ಆರಂಭವಾಗಿದೆ.

ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿರುವಂತೆ ಗುಂಡಿನ ಕಾಳಗದಲ್ಲಿ ಓರ್ವ ಭದ್ರತಾ ಸಿಬ್ಬಂದಿ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ ಎಂದು ಹೇಳಲಾಗಿದೆ. 

ಇನ್ನು ಉಗ್ರರ ಕೃತ್ಯವನ್ನು ಭಾರತ ಕಠಿಣವಾಗಿ ಖಂಡಿಸಿದ್ದು, ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು, ಆಫ್ಘನ್ ನಲ್ಲಿ ಸಿಖ್ಖರ ಮಾರಣಹೋಮ ಉಗ್ರರ ಹೇಡಿತನದ ಪ್ರತೀಕ. ಧರ್ಮಾಧಾರಿತ ಹಿಂಸೆಯನ್ನು ಭಾರತ ಎಂದೂ ಸಹಿಸುವುದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com