ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೊರೋನಾ ವೈರಸ್: ವಿಶ್ವದೆಲ್ಲೆಡೆ ಮಹಾಮಾರಿಗೆ 30249 ಮಂದಿ ಬಲಿ, ಸೋಂಕಿತರ ಸಂಖ್ಯೆ 6,49,904ಕ್ಕೆ ಏರಿಕೆ

ಮನುಕುಲಕ್ಕೆ ಮಾರಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ವಿಶ್ವದೆಲ್ಲೆಡೆ 30249 ಮಂದಿಯನ್ನು ಬಲಿ ಪಡೆದುಕೊಂಡಿದ್ದು, 6,49,904 ಮಂದಿ ಸೋಂಕಿಗೊಳಗಾಗಿದ್ದಾರೆಂದು ವರದಿಗಳಿಂತ ತಿಳಿದುಬಂದಿದೆ.

ಪ್ಯಾರಿಸ್: ಮನುಕುಲಕ್ಕೆ ಮಾರಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ವಿಶ್ವದೆಲ್ಲೆಡೆ 30249 ಮಂದಿಯನ್ನು ಬಲಿ ಪಡೆದುಕೊಂಡಿದ್ದು, 6,49,904 ಮಂದಿ ಸೋಂಕಿಗೊಳಗಾಗಿದ್ದಾರೆಂದು ವರದಿಗಳಿಂತ ತಿಳಿದುಬಂದಿದೆ. 

ಇಟಲಿಯಲ್ಲಿ ಈಗಾಗಲೇ ವೈರಸ್'ಗೆ 10,000 ಮಂದಿ ಸಾವನ್ನಪ್ಪಿದ್ದು, ಯುರೋಪ್ ನಲ್ಲಿ 20,059 ಮಂದಿ ಬಲಿಯಾಗಿದ್ದಾರೆ. ಸ್ಪೇನ್ ನಲ್ಲಿ 5,690 ಮಂದಿ ಬಲಿಯಾಗಿದ್ದು, ವೈರಸ್ ನಿಂದಾಗಿ ವಿಶ್ವದೆಲ್ಲೆಡೆ ಮತ್ತಷ್ಟು ಮಂದಿ ಸಾವನ್ನಪ್ಪುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಈ ನಡುವೆ ವಿಶ್ವದ ದೊಡ್ಡಣ್ಣ ಎಂದೇ ಹೇಳಲಾಗುವ ಅಮೆರಿಕಾದಲ್ಲಿ 2000 ಮಂದಿ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 1.16 ಲಕ್ಷಕ್ಕೆ ಏರಿಕೆಯಾಗಿದೆ. 

ಕೊರೋನಾ ಸೋಂಕನ್ನು ಆರಂಭದಲ್ಲಿ ಗಂಭೀರವಾಗಿ ಪರಿಗಣಿಸದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇದೀಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ. ಇದರಂತೆ ಸೇನೆಯ ಸಹಾಯದಿಂದ ರೋಗಿಗಳಿಗಾಗಿ ತಾತ್ಕಾಲಿಕ ಆಸ್ಪತ್ರೆಗಳನ್ನು ನಿರ್ಮಿಸಲು ಆದಶಿಸಿದ್ದಾರೆ. 

ಕೊರೋನಾ ವಿರುದ್ಧ ಹೋರಾಡಲು ಹಾಗೂ ಸಮಸ್ಯೆಯಲ್ಲಿರುವ ಅಮೆರಿಕಾದ ಆರ್ಥಿಕತೆಯನ್ನು ಮೇಲೆತ್ತಲು ಐತಿಹಾಸಿಕ 2 ಲಕ್ಷ ಕೋಟಿ ಡಾಲರ್ ಆರ್ಥಿಕ ಪ್ಯಾಕೇಜ್'ಗೆ ಟ್ರಂಪ್ ಸಹಿ ಹಾಕಿದ್ದಾರೆ. ಿದಕ್ಕೆ ಸಂಬಂಧಿಸಿದ ಕಾಯ್ದೆ ಅಮೆರಿಕದ ಸಂಸತ್ತಿನಲ್ಲಿ ಅಂಗೀಕಾರವಾಗಿದೆ. 

Related Stories

No stories found.

Advertisement

X
Kannada Prabha
www.kannadaprabha.com