ಕೊರೋನಾದಿಂದ ಅಮೆರಿಕಾದಲ್ಲಿ ಇನ್ನೆರಡು ವಾರ ಸಾವಿನ ಹೂಡೆತ ಸಾಧ್ಯತೆ: ಡೊನಾಲ್ಡ್ ಟ್ರಂಪ್ 

ಕೊರೋನಾವೈರಸ್ ಸಾಂಕ್ರಾಮಿಕ ಕಾಯಿಲೆಯಿಂದಾಗಿ ಅಮೆರಿಕಾದಲ್ಲಿ ಇನ್ನೆರಡು ವಾರಗಳ ಕಾಲ ಸಾವಿನ ಪ್ರಕರಣಗಳು ಮುಂದುವರೆಯುವ ಸಾಧ್ಯತೆಯಿದೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಡೊನಾಲ್ಡ್ ಟ್ರಂಪ್
ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್ : ಕೊರೋನಾವೈರಸ್ ಸಾಂಕ್ರಾಮಿಕ ಕಾಯಿಲೆಯಿಂದಾಗಿ ಅಮೆರಿಕಾದಲ್ಲಿ ಇನ್ನೆರಡು ವಾರಗಳ ಕಾಲ ಸಾವಿನ ಪ್ರಕರಣಗಳು ಮುಂದುವರೆಯುವ ಸಾಧ್ಯತೆಯಿದೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಶ್ವೇತಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 30ರವರೆಗೂ ಸಾಮಾಜಿಕ ಅಂತರ ಮಾರ್ಗದರ್ಶಿ ಮಾರ್ಗಸೂಚಿಯನ್ನು ಸರ್ಕಾರ ವಿಸ್ತರಿಸಿದೆ ಎಂದು ತಿಳಿಸಿದರು.

2.2 ಟ್ರಿಲಿಯನ್ ಡಾಲರ್ ಮೊತ್ತದ ಆರ್ಥಿಕ ರಕ್ಷಣಾ ಪ್ಯಾಕೇಜ್ ಗೆ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.ಕೊರೋನಾವೈರಸ್ ನಿಂದ ಆರ್ಥಿಕತೆ ಮೇಲೆ ಉಂಟಾಗಿರುವ ಹಾನಿಯಿಂದ ಸಂಕಷ್ಟ ಅನುಭವಿಸುತ್ತಿರುವ ಅಮೆರಿಕಾದ ಕಾರ್ಮಿಕರಿಗೆ ಈ ಮಸೂದೆ ಅಗತ್ಯವಾದ ಪರಿಹಾರ ನೀಡಲಿದೆ. 

ಕೊರೋನಾವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಏಪ್ರಿಲ್ 30ರವರೆಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜನರಿಗೆ ಸೂಚಿಸಲಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.

ಜೂನ್ 1 ರೊಳಗೆ ದೇಶವು  ಚೇತರಿಕೆಯ ಹಾದಿಗೆ ಮರಳಲಿದೆ ಎಂದು ಡೊನಾಲ್ಡ್ ಟ್ರಂಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com