ಅಮೆರಿಕಾದಲ್ಲಿ ಕೊರೋನಾ ರಣಕೇಕೆ: 24 ಗಂಟೆಗಳಲ್ಲಿ  2,448 ಮಂದಿ ಬಲಿ, ಒಟ್ಟು ಸಾವಿನ ಸಂಖ್ಯೆ 75,543ಕ್ಕೆ ಏರಿಕೆ

ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ ಬರೋಬ್ಬರಿ 2,448 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 75,543ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ ಬರೋಬ್ಬರಿ 2,448 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 75,543ಕ್ಕೆ ಏರಿಕೆಯಾಗಿದೆ. 

ಈ ನಡುವೆ ಅಮೆರಿಕಾದಲ್ಲಿ 1,254,750 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ವೈರಸ್ ಮಟ್ಟಹಾಕಲು ಅಲ್ಲಿನ ಅಧಿಕಾರಿಗಳು ಹೆಣಗಾಡುತ್ತಿದ್ದಾರೆ. 

 1,254,750 ಮಂದಿ ಸೋಂಕಿತರ ಪೈಕಿ 217,250 ಮಂದಿ ವೈರಸ್ ನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com