ಕೊರೋನಾ ವೈರಸ್: ವಿಶ್ವಾದ್ಯಂತ 40,24,140ಕ್ಕೇರಿದ ಸೋಂಕಿತರ ಸಂಖ್ಯೆ, 2,79,319 ಕ್ಕೇರಿದ ಸಾವಿನ ಸಂಖ್ಯೆ

ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 40,24,140ಕ್ಕೇರಿದ್ದು, ಅಂತೆಯೇ ಸಾವಿನ ಸಂಖ್ಯೆ ಕೂಡ 2,79,319 ಕ್ಕೇರಿದೆ ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾಷಿಂಗ್ಟನ್: ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 40,24,140ಕ್ಕೇರಿದ್ದು, ಅಂತೆಯೇ ಸಾವಿನ ಸಂಖ್ಯೆ ಕೂಡ 2,79,319 ಕ್ಕೇರಿದೆ ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮಾಹಿತಿ ನೀಡಿದೆ.

ಒಟ್ಟಾರೆ ಸೋಂಕಿತರ ಪೈಕಿ ಈ ವರೆಗೂ 13,75,681 ಲಕ್ಷ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ಸೋಂಕು ಕಾಣಿಸಿಕೊಂಡು 2 ತಿಂಗಳೇ ಕಳೆದರೂ ಇನ್ನೂ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಈ ಸೋಂಕಿಗೆ ಔಷಧಿ ಕಂಡುಹಿಡಿಯಲು ಎಲ್ಲ ದೇಶಗಳ  ವೈದ್ಯಕೀಯ ತಜ್ಞರು ಪ್ರಯತ್ನಿಸುತ್ತಲೇ ಇದ್ದಾರೆ. ಆದರೂ ನಿಖರವಾದ ಮದ್ದು ಪತ್ತೆಯಾಗಿಲ್ಲ.

ಇನ್ನು ಕೊರೋನಾ ವೈರಸ್ ಅತ್ಯಂತ ವ್ಯಾಪಕವಾಗಿ ತುತ್ತಾಗಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 13,09,550ಕ್ಕೇರಿದ್ದು, 78,795 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಅಂತೆಯೇ 2,12,534 ಮಂದಿ ಸೋಂಕಿತರು ಈ ವರೆಗೂ ಗುಣಮುಖರಾಗಿದ್ದಾರೆ. ಇನ್ನು 2ನೇ ಸ್ಥಾನದಲ್ಲಿ ಸ್ಪೈನ್  ಇ್ದದು, ಇಲ್ಲಿ ಸೋಂಕಿತರ ಸಂಖ್ಯೆ 2,23,578ಕ್ಕೆ ಏರಿಕೆಯಾಗಿದೆ. 26,478 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಟಲಿಯಲ್ಲಿ ಸೋಂಕಿತರ ಸಂಖ್ಯೆ 2,18,268ಕ್ಕೆ ಏರಿಕೆಯಾಗಿದ್ದು, 30,395 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಬ್ರಿಟನ್ ನಲ್ಲೂ ಸೋಂಕಿತರ ಸಂಖ್ಯೆ 2,16,525 ಕ್ಕೆ  ಏರಿಕೆಯಾಗಿದ್ದು, 31,662 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 

ಭಾರತದಲ್ಲಿ ಕೊರೋನಾ ಆರ್ಭಟ ಜೋರಾಗಿದ್ದು, ಸೋಂಕಿತರ ಸಂಖ್ಯೆ 62,939ಕ್ಕೆ ಏರಿಕೆಯಾಗಿದೆ. 2,109 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 19,358 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com