ವಿಶ್ವದಲ್ಲಿ ಕೊರೋನಾ ರಣಕೇಕೆ: 305,424 ಲಕ್ಷ ಮಂದಿ ಸಾವು, ಸೋಂಕಿತರ ಸಂಖ್ಯೆ 45 ಲಕ್ಷಕ್ಕೆ ಏರಿಕೆ

ವಿಶ್ವದೆಲ್ಲೆಡೆ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಮಹಾಮಾರಿಗೆ ಈ ವರೆಗೂ ಜಗತ್ತಿನಾದ್ಯಂತ 305,424 ಲಕ್ಷ ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 45 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿಗೊಳಗಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಲಂಡನ್: ವಿಶ್ವದೆಲ್ಲೆಡೆ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಮಹಾಮಾರಿಗೆ ಈ ವರೆಗೂ ಜಗತ್ತಿನಾದ್ಯಂತ 305,424 ಲಕ್ಷ ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 45 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿಗೊಳಗಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಅಮೆರಿಕಾದಲ್ಲಿ ಕೊರೋನಾ ಆರ್ಭಟ ಹೆಚ್ಚಾಗಿಯೇ ಇದ್ದು, ಶುಕ್ರವಾರ ಒಂದೇ ದಿನ 7 ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ, 391 ಮಂದಿ ಬಲಿಯಾಗಿದ್ದಾರೆ. 

ಈ ಮೂಲಕ ಆ ರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 14 ಲಕ್ಷ ದಾಟಿದ್ದು, ಸಾವಿನ ಸಂಖ್ಯೆ 87,303ಕ್ಕೆ ತಲುಪಿದೆ. ಈ ವರೆಗೆ 3.18 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಆದರೆ, 16,240 ಜನರ ಸ್ಥಿತಿ ಈಗಲೂ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com